ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಬಂಟ್ವಾಳ : ಆರ್ಟ್‌ ಗ್ಯಾಲರಿ ಮಾಲಕನ ಶವ ಕೆರೆಯಲ್ಲಿ ಪತ್ತೆ

Published

on

 

ಬಂಟ್ವಾಳ : ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್ಲೈಸಿ ಏಜೆಂಟ್ ಸೂರಿಕುಮೇರ್ ನಿವಾಸಿ ನಾರಾಯಣ ಕುಲಾಲ್ ಎಂಬವರ ಮೃತದೇಹ ಅ.2ರಂದು ಬೆಳಗ್ಗೆ ಕೆರೆಯಲ್ಲಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿಋುವ ಕೆರೆಯಲ್ಲಿ ಪತ್ತೆಯಾಗಿದೆ.

 

ಇದು ಆತ್ಮಹತ್ಯೆ ಪ್ರಕರಣ ಎಂದು ಮೇಲ್ನೋಟಕ್ಕೆ ಕಂಡುಬರುತ್ತದೆ.ಮುಂಜಾನೆ 5ರ ವೇಳೆಗೆ ಪರ್ಲೊಟ್ಟು ಎಂಬಲ್ಲಿ ಕೆರೆಯ ಬಳಿ ಬೈಕ್, ಮೊಬೈಲ್, ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ ಕೆರೆಗೆ ಹಾರಿ ಆತ್ಮಹತ್ಯೆಗೈದಿರಬೇಕು ಎಂಬ ಸಂಶಯದಿಂದ ವಿಟ್ಲ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ.

 

ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಕೆರೆಯಲ್ಲಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಥಮ ನೋಟದಲ್ಲಿ ಇದು ಆತ್ಮಹತ್ಯೆ ಎಂದು ಕಂಡುಬಂದರೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version