Published
1 year agoon
By
Akkare Newsಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಅ. 7 ರಂದು ಬೈಪಾಸ್ ಬಳಿ ಇರುವ ಶಾಸಕರ ಟ್ರಸ್ಟ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಟ್ರಸ್ಟ್ನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಶಾಂತಿನಗರ ತಿಳಿಸಿದ್ದಾರೆ.
ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಮತ್ತು ಕೆಎಂಸಿ ಆಸ್ಪತ್ರೆ ಡಾ. ಅಂಬೇಡ್ಕರ್ ವೃತ್ತ ಮಂಗಳೂರು ಇವರ ಸಹಯೋಗದಲ್ಲಿ ಶಿಬಿರ ನಡೆಯಲಿದೆ. ನುರಿತ ವೈದ್ಯರುಗಳು ಶಿಬಿರದಲ್ಲಿ ಭಾಗವಹಿಸಲಿದ್ದು ಕೆಲವೊಂದು ಕಾಯಿಲೆಗಳಿಗೆ ಸ್ಥಳದಲ್ಲೇ ಔಷಧವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಸಾಮಾನ್ಯ ರೋಗ, ಹೃದಯ ರೋಗ, ಕಣ್ಣಿನ ವಿಭಾಗ, ಎಲುಬು ಮತ್ತು ಕೀಲು ರೋಗ, ಗ್ಯಾಸ್ಟೋಎಂಟರಾಲಜಿ ವಿಭಾಗ, ಮೂತ್ರಶಾಸ್ತç ವಿಭಾಗದ ನುರಿತ ವೈದ್ಯರುಗಳ ಭಾಗವಹಿಸಿ ಸೂಕ್ತ ಚಿಕಿತ್ಸೆ ಮತ್ತು ತಪಾಸಣೆಯನ್ನು ನಡೆಸಲಿದ್ದಾರೆ.
ಉಚಿತ ಬಿ ಪಿ ಹಾಗೂ ಮಧುಮೇಹ ತಪಾಸಣೆ, ಅಗತ್ಯ ಇರುವವರಿಗೆ ಉಚಿತ ಇಸಿಜಿ ಪರೀಕ್ಷೆ, ಉಚಿತ ಔಷಧ ವಿತರಣೆ, ಮತ್ತು ಉಚಿತ ಓದುವ ಕನ್ನಡಕದ ವಿತರಣೆ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯತನಕ ಶಿಬಿರ ನಡೆಯಲಿದ್ದು ಸಾರ್ವಜನಿಕರು ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕಾರ್ಯಾಧ್ಯಕ್ಷರು ವಿನಂತಿಸಿದ್ದಾರೆ.