ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಜಾತಿ ಸಮೀಕ್ಷೆ ಸಮಾಜವನ್ನು ವಿಭಜಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ಮೈಸೂರು: ಜಾತಿ ಗಣತಿ ಸಮಾಜವನ್ನು ವಿಭಜಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಾತಿ ಗಣತಿ ಸಮಾಜವನ್ನು ವಿಭಜಿಸುತ್ತದೆ ಎಂದು ಪ್ರಧಾನಿಗಳು ಹೇಳಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬಡತನ ನಿವಾರಣೆ ಕಾರ್ಯಕ್ರಮ ರೂಪಿಸುವಾಗ ಸಮ ಸಮಾಜ ನಿರ್ಮಾಣ ಮಾಡಬೇಕು. ಯಾವ ಜಾತಿ ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ಆರ್ಥಿಕವಾಗಿ, ಸಾಮಾಜಿಕವಾಗಿ ರಾಜಕೀಯವಾಗಿ ಯಾವ ಸ್ಥಿತಿಗತಿಯಲ್ಲಿದೆ ಎಂದು ತಿಳಿಯಬೇಕು. ನಮ್ಮದು ಜಾತಿ ವ್ಯವಸ್ಥೆಯ ಸಮಾಜವಾಗಿದೆ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಅಸಮಾನತೆ ಇರುವ ಜಾತಿಗಳನ್ನು ಮುಖ್ಯವಾಹಿನಿಗೆ ತರಲು ಅಂಕಿಅಂಶಗಳು ಅಗತ್ಯ. ಅದಕ್ಕಾಗಿ ಜಾತಿಗಣತಿ ಮಾಡಬೇಕು. ಸಾಮಾಜಿಕ- ಆರ್ಥಿಕ ಸಮೀಕ್ಷೆ ಹಾಗೂ ಜಾತಿ ಸಮೀಕ್ಷೆ ಆಗಬೇಕು. ಇದು ಖಂಡಿತವಾಗಿಯೂ ಸಮಾಜವನ್ನು ಒಡೆಯುವುದಿಲ್ಲ ಎಂದು ಅಭಿಪ್ರಾಯಪಟ್ಟರು.

 

ಬರಪರಿಹಾರಕ್ಕೆ 4860 ಕೋಟಿ ರೂ.ಗಳನ್ನು ಕೋರಲಾಗಿದೆ

 

ಗ್ಯಾರಂಟಿ ಯೋಜನೆಗಳಿಗೆ ತೊಂದರೆ ಇಲ್ಲ. ಬರ ಪರಿಹಾರಕ್ಕೂ ಕೇಂದ್ರ ಸರ್ಕಾರಕ್ಕೆ 4860 ಕೋಟಿ ರೂ.ಗಳನ್ನು ಕೋರಿದ್ದೇವೆ. ಆದರೆ ಬೆಲೆ ನಷ್ಟವಾಗಿರುವುದು 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ. ಎಲ್ಲಾ ಸೇರಿ ಒಟ್ಟು 3000 ಕೋಟಿ ರೂ.ಗಳಿಗೂ ನಷ್ಟ ಉಂಟಾಗಿದೆ. ಎನ್. ಡಿ.ಆರ್.ಎಫ್ ನಿಯಮಗಳ ಪ್ರಕಾರ 4860 ಕೋಟಿ ರೂ.ಗಳನ್ನು ಕೋರಿದ್ದೇವೆ. ಕೇಂದ್ರ ಬರ ಅಧ್ಯಯನ ತಂಡ ಮೂರು ತಂಡಗಳಾಗಿ 11 ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಅವರು ವರದಿ ನೀಡಿದ ಆಧಾರದ ಮೇಲೆ ಕೇಂದ್ರ ಸರ್ಕಾರ ಪರಿಹಾರ ನಿಗದಿ ಮಾಡಲಿದೆ ಎಂದರು.

 

ಮೋದಿಯವರು ಹೇಳುವುದಕ್ಕೂ, ಮಾಡುವುದಕ್ಕೂ ವ್ಯತ್ಯಾಸವಿದೆ

ನರೇಂದ್ರ ಮೋದಿಯವರು ಎಲ್ಲರನ್ನೂ ಒಳಗೊಂಡ ಸಮಾಜ, ಸಬ್ ಕೆ ಸಾಥ್, ಸಬ್ ಕಾ ವಿಕಾಸ್ ಎನ್ನುತ್ತಾರೆ. ಮುಸಲ್ಮಾನರಿಗೆ ಟಿಕೆಟ್ ಕೊಡದೆ ಹೋದರೆ ಸಬ್ ಕೆ ಸಾಥ್ ಆಗುತ್ತದೆಯೇ, ಎಲ್ಲರನ್ನೂ ಒಳಗೊಂಡಂತೆ ಆಗುತ್ತದೆಯೇ? ಹೇಳುವುದಕ್ಕೂ, ಮಾಡುವುದಕ್ಕೂ ವ್ಯತ್ಯಾಸವಿದೆ. ಹೇಳೋದು ಬೇರೆ, ವಸ್ತುಸ್ಥಿತಿ ಬೇರೆ ಎಂದರು.

ನವೆಂಬರ್ ನಲ್ಲಿ ಜಾತಿ ಸಮೀಕ್ಷೆ ವರದಿ ಸಲ್ಲಿಕೆ

 

ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವರದಿ ಪಡೆಯಲಿಲ್ಲ. ಈಗ ಬೇರೆ ಅಧ್ಯಕ್ಷ ರಿದ್ದು, ಅವರಿಗೆ ಕಾಂತರಾಜು ವರದಿ ಇದ್ದಂತೆಯೇ ಮಾಡಿಕೊಡುವಂತೆ ಹೇಳಿದ್ದೇನೆ. ಅವರು ನವೆಂಬರ್ ನಲ್ಲಿ ವರದಿ ನೀಡುವುದಾಗಿ ಹೇಳಿದ್ದಾರೆ ಎಂದರು.

 

ಪ್ರತ್ಯೇಕ ವರ್ಗ; ಸಮೀಕ್ಷೆ ವರದಿ ಬಂದ ನಂತರ ಪರಿಶೀಲನೆ

ಬಹಳ ಹಿಂದುಳಿದವರು ರಾಷ್ಟ್ರೀಯ ಮಟ್ಟದಲ್ಲಿ ಪ್ರತ್ಯೇಕ ವರ್ಗ ಬೇಕು ಎಂದು ಕರ್ನಾಟಕದಲ್ಲಿ ಬೇಡಿಕೆ ಇರುವ ಬಗ್ಗೆ ಉತ್ತರಿಸಿ ಅದನ್ನು ಮಾಡಲು ಹಿಂದುಳಿದ ವರ್ಗಗಳ ಸಮೀಕ್ಷೆ ವರದಿ ಬಂದ ನಂತರ ಪರಿಶೀಲಿಸಲಾಗುವುದು ಎಂದರು.

 

ಜನರ ಅಹವಾಲು ಕೇಳಲು ಸೂಚನೆ

ಕೇಂದ್ರ ಬರ ಅಧ್ಯಯನ ತಂಡ ಸರಿಯಾಗಿ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಅಧ್ಯಯನ ತಂಡಕ್ಕೆ ಎಲ್ಲೆಡೆ ಭೇಟಿ ಮಾಡಿ,ಜನರ ಅಹವಾಲು ಕೇಳಬೇಕು, ಜನಪ್ರತಿನಿಧಿಗಳ ಮಾತನ್ನೂ ಆಲಿಸುವಂತೆ ಸೂಚಿಸಿದ್ದೇನೆ ಎಂದರು.

 

ಬರಪೀಡಿತ ಜಿಲ್ಲೆಗಳ ಪಟ್ಟಿ ಕೇಂದ್ರ ತಂಡ ಸಿದ್ಧಪಡಿಸುತ್ತದೆ

ಕೇಂದ್ರ ಬರ ಅಧ್ಯಯನ ತಂಡ ಕಾವೇರಿ ಕಣಿವೆಗೆ ಭೇಟಿ ಮಾಡುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ಅದನ್ನು ನಾವು ತೀರ್ಮಾನಿಸುವುದಿಲ್ಲ. ಕೇಂದ್ರ ತಂಡ ಭೇಟಿ ನೀಡಬೇಕಾದ ಸ್ಥಳಗಳನ್ನು ನಿರ್ಧರಿಸುತ್ತದೆ. ಜಿಲ್ಲೆಗಳನ್ನು ಅವರೇ ಪಟ್ಟಿ ಮಾಡಿಕೊಳ್ಳುತ್ತಾರೆ ಎಂದರು. ಹಸಿರು ಬರ ಇದೆ. ಗಿಡ ಇದ್ದರೆ ಸಾಲದು, ಬೆಳೆ ಬರಬೇಕು ಎಂದರು.

 

ಚುನಾವಣೆ ಬಗ್ಗೆ ಚರ್ಚೆ

ಸೋಮವಾರ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಗೆ ತೆರಳುತ್ತಿರುವ ಬಗ್ಗೆ ಮಾತನಾಡಿ ಅಜೆಂಡಾ ಬಗ್ಗೆ ನನಗೆ ತಿಳಿದಿಲ್ಲ. ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ಮಾಡುತ್ತೇವೆ ಎಂದರು.

 

ಕೇಂದ್ರ ಸರ್ಕಾರದ ನಡೆ ಸರಿಯಲ್ಲ

ಕೇಂದ್ರ ಸರ್ಕಾರದ ವಿರುದ್ಧ ಟೀಕಿಸುವ ಮಾಧ್ಯಮಗಳ ಮೇಲೆ ದೇಶದ್ರೋಹದ ಪ್ರಕರಣ ಹಾಕುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಅದು ಸರಿಯಲ್ಲ ಎಂದರು.

 

ಹೊಸ ಮದ್ಯದಂಗಡಿಗಳನ್ನು ತೆರೆಯಲು ಪರವಾನಾಗಿಯನ್ನು ನೀಡುವುದಿಲ್ಲ

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಅವಕಾಶವಿಲ್ಲ ಎಂದು ಸಿತೆಂ ಹೇಳಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುಡಿಯುವವರನ್ನು ತಡೆಯಲು ಆಗುವುದಿಲ್ಲ, ಅದರಿಂದ ಉದ್ಯೋಗ ಸೃಷ್ಟಿ ಯಾಗುತ್ತದೆ ಎಂದಿರುವ ಬಗ್ಗೆ ಮಾತನಾಡಿ, ಹೊಸತಾಗಿ ತೆರೆಯುತ್ತೇವೆ ಎಂದು ಹೇಳಿಲ್ಲ. ಹೊಸತಾಗಿ ಕೊಡುತ್ತೇವೆ ಎಂದು ಹೇಳಿಲ್ಲ. ಅವರ ಅಭಿಪ್ರಾಯ ಹೇಳಿದ್ದಾರೆ. ನನ್ನ ಅಭಿಪ್ರಾಯದಲ್ಲಿ ಹೊಸ ಪರವಾನಾಗಿಯನ್ನು ಕೊಡಬೇಕಾದ ಅಗತ್ಯ ಇಲ್ಲ ಎಂದರು.

 

ಸಾರ್ವಜನಿಕ ಅಭಿಪ್ರಾಯ ಏನಿದೆ ಎಂದು ನೋಡಿಕೊಂಡು ತೀರ್ಮಾನ ಮಾಡುತ್ತೇವೆ. ಪ್ರಸ್ತುತ ನಮ್ಮ ಮುಂದೆ ಪ್ರಸ್ತಾವನೆ ಇಲ್ಲ. ಹೊಸ ಮದ್ಯದಂಗಡಿಗಳನ್ನು ತೆರೆಯಲು ಪರವಾನಗಿಯನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

 

 

ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂಬ ಶ್ಯಾಮನೂರು ಶಿವಶಂಕರಪ್ಪ ಅವರು ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

 

ಮಹಿಷ ದಸರಾ ಸರ್ಕಾರ ಆಚರಿಸಿಲ್ಲ

ಮಹಿಷ ದಸರಾ ಆಚರಿಸುವ ಬಗ್ಗೆ ಮಾತನಾಡಿ ಹಿಂದೆಯೂ ಆಚರಿಸಿದ್ದಾರೆ ಆದರೆ ಚಾಮುಂಡಿ ಬೆಟ್ಟದ ಮೇಲೆ ಆಗಿಲ್ಲ ಎಂದರು.  ಮಹಿಷಾ ದಸರಾ ಎಂದೂ ಸರ್ಕಾರ ಆಚರಿಸಿಲ್ಲ ಎಂದರು.

 

ಮಾಹಿತಿಯ ಕೊರತೆ

ಕಾವೇರಿ ನೀರಿನ ಸಮಸ್ಯೆಗೆ ನಾರಿಮನ್ ಕಾರಣ ಎಂದು ಪ್ರಸನ್ನ ಕುಮಾರ್ ಹೇಳಿರುವ ಬಗ್ಗೆ ಮಾತನಾಡಿ ಅವರಿಗೆ ಮಾಹಿತಿ ಕೊರತೆ ಇದೆ ಎಂದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version