Published
3 years agoon
By
Akkare News
ಚಿಕ್ಕಬಳ್ಳಾಪೂರ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಪ್ರದೀಪ್ ಈಶ್ವರ್ ಕಂಡು ಸ್ಪರ್ಧಿಗಳು ಅಚ್ಚರಿ ವ್ಯಕ್ತ ಪಡಿಸಿದರು. ತುಕಾಲಿ ಸಂತು, ‘ನಾವು ಒಬ್ಬ ಎಂ.ಎಲ್.ಎ ಜೊತೆ ಸ್ಪರ್ಧೆ ಮಾಡಬೇಕು’ ಎಂದು ಮಾತನಾಡಿದರೆ, ಅದಕ್ಕೆ ಪ್ರದೀಪ್, ‘ನಾವು ಸೋಲಬೇಕು ಅಂತಾನೆ ಬೆಂಗಳೂರಿಗೆ ಬಂದವನು’ ಎಂದು ಉತ್ತರಿಸಿದ್ದಾರೆ. ಪ್ರದೀಪ್ ಈಶ್ವರ್ ಮನೆಗೆ ಬಂದಿರುವುದು ಹೊಸ ಕಳೆ ಬಂದಂತಾಗಿದೆ. ಒಬ್ಬ ಜನಪ್ರತಿನಿಧಿ ಎಷ್ಟು ದಿನ ಆ ಮನೆಯಲ್ಲಿ ಉಳಿಯಬಹುದು ಎನ್ನುವುದೇ ಅಚ್ಚರಿ.
ಪ್ರದೀಪ್ ಈಶ್ವರ್ ಬಿಗ್ ಮನೆಗೆ ಹೋಗಲು ಅನಾಥ ಮಕ್ಕಳೆ ಕಾರಣ ಆಗಿದ್ದಾರೆ. ಇವರಿಗಾಗಿಯೇ ಬಿಗ್ ಮನೆಗೆ ಪ್ರದೀಪ್ ಈಶ್ವರ್ ಹೋಗಿದ್ದಾರೆ. ಅಲ್ಲಿದ್ದುಕೊಂಡು ಅದರಿಂದ ಬರುವ ಹಣವನ್ನ ಅನಾಥ ಮಕ್ಕಗಳಿಗೆ ಕೊಡಲು ನಿರ್ಧರಿಸಿದ್ದಾರೆ ಅನ್ನುವ ಮಾಹಿತಿ ಇದೆ.