ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಕುಖ್ಯಾತ ಶಾರ್ಪ್ ಶೂಟರ್ ಅಲಿ ಮುನ್ನಾ ಬಂಧನ

Published

on

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಠಾಣೆಗಳಲ್ಲಿ ಬಂಧನ ವಾರಂಟ್ ಎದುರಿಸುತ್ತಿದ್ದ ಕುಖ್ಯಾತ ಶಾರ್ಪ್ ಶೂಟರ್ ಕೇರಳದ ಉಪ್ಪಳ ಸಮೀಪದ ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾನನ್ನು ಬಂಧಿಸಲಾಗಿದೆ.

ಈತ ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೀಶನ ಸಹಚರ ಎನ್ನಲಾಗಿದೆ.

ಶಾರ್ಪ್ ಶೂಟರ್ ಹನೀಫ್ ಯಾನೆ ಅಲಿ ಮುನ್ನ ಭೂಗತ ಪಾತಕಿ ರವಿ ಪೂಜಾರಿಪರವಾಗಿ ಕರಾವಳಿಯಲ್ಲಿ ಹಲವು ಶೂಟೌಟ್, ದರೋಡೆ, ಬೆದರಿಕೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ರಾಜ್ಯದ ಅನೇಕ ಠಾಣೆಗಳು ಅವನ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಿದ್ದವು.

ಈತನ ವಿರುದ್ಧ ಕೊಣಾಜೆ, ಮಂಗಳೂರು ಉತ್ತರ, ಪುತ್ತೂರು, ಬರ್ಕೆ, ವಿಟ್ಲ, ಉಳ್ಳಾಲ, ಬೆಂಗಳೂರು ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣಗಳಿದ್ದು, 2010 ಮತ್ತು 2013 ಕಾಸರಗೋಡು ಬೇವಿಂಜ ಪಿಡಬ್ಲ್ಯುಡಿ ಗುತ್ತಿಗೆದಾರರ ಶೂಟೌಟ್ ಪ್ರಕರಣ, ಮಂಜೇಶ್ವರದಲ್ಲಿ ಕಳ್ಳತನ, ಕುಂಬಳೆ ಹಾಗೂ ವಿದ್ಯಾನಗರ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿದ್ದವು.

 

ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ಮತ್ತು ಕೊಣಾಜೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೇರಳದಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement