ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಉಳ್ಳಾಲ: ಬೈಕ್ ಚಾಲಕನ ಧಾವಂತಕ್ಕೆ ಪಾದಚಾರಿ ಮಹಿಳೆ ಬಲಿ

Published

on

ಉಳ್ಳಾಲ: ಮಂಗಳೂರು ದಸರಾಕ್ಕೆ ತೆರಳುತ್ತಿದ್ದ ಬೈಕ್ ಚಾಲಕನ ಧಾವಂತಕ್ಕೆ ರಸ್ತೆಯನ್ನು ದಾಟುತ್ತಿದ್ದ ಪಾದಚಾರಿ ಮಹಿಳೆಯೋರ್ವಳು ಸಾವನ್ನಪ್ಪಿರುವ ಘಟನೆ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ.

ಬಾಗಲಕೋಟೆ ಬಾದಾಮಿ ಲಖಮಾಪುರ ನಿವಾಸಿ ಶಿವಪ್ಪ ದೊಡ್ಡಮನಿ ಎಂಬವರ ಪತ್ನಿ ಎಲ್ಲವ್ವ ಶಿವಪ್ಪ ದೊಡ್ಡಮನಿ (50) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

 

ಶಿವಪ್ಪ ಅವರು ಕೂಲಿ ಕಾರ್ಮಿಕರಾಗಿದ್ದು, ಸಂಜೆ ನಂತರ ಬಬ್ಬುಕಟ್ಟೆ ಬಳಿಯ ಸೋಝಾ ಇಲೆಕ್ಟ್ರಿಕಲ್ಸ್ ಬಳಿಯ ಮನೆಯಲ್ಲಿ ವಾಚ್ ಮೆನ್ ವೃತ್ತಿ ನಿರ್ವಹಿಸುತ್ತಿದ್ದರು. ಎರಡು ದಿನಗಳ ಹಿಂದಷ್ಟೇ ಬಾದಾಮಿಯಿಂದ ಪತ್ನಿ ಎಲ್ಲವ್ವ ಬಂದು ಪತಿ ಜೊತೆಗೆ ತಂಗಿದ್ದರು. ಮಂಗಳವಾರ ಸಂಜೆ 8 ಗಂಟೆ ಸುಮಾರಿಗೆ ಮನೆಯ ವಿರುದ್ಧ ಧಿಕ್ಕಿನಲ್ಲಿರುವ ಅಂಗಡಿಗೆ ಸಾಮಗ್ರಿ ತರಲೆಂದು ತೆರಳಿದ್ದರು. ಅಲ್ಲಿಂದ ವಾಪಸ್ ಬರಲು ರಸ್ತೆ ದಾಟುವ ಸಂದರ್ಭದಲ್ಲಿ ಮಂಗಳೂರು ದಸರಾಕ್ಕೆ ತೆರಳುತ್ತಿದ್ದ ದೈಗೋಳಿ ನಿವಾಸಿ ಗಗನ್ ಎಂಬಾತನ ಬೈಕ್ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಮಹಿಳೆಯನ್ನು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೈಕಿನಲ್ಲಿದ್ದ ಸವಾರ ಗಗನ್ ಹಾಗೂ ಇನ್ನೋರ್ವನಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version