ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಇಂದು ರಾತ್ರಿ ಗಜಕೇಸರಿ ಯೋಗ ಸೃಷ್ಟಿಸಲಿರುವ ಚಂದ್ರ ಗ್ರಹಣ

Published

on

  • 30 ವರ್ಷಗಳಿಗೆ ನಡೆಯುವ ಅಪರೂಪದ ಚಂದ್ರ ಗ್ರಹಣ

ಬೆಂಗಳೂರು : ಇಂದು (ಶನಿವಾರ) ಈ ವರ್ಷದ ಕೊನೆಯ ಗ್ರಹಣವಾಗಿರುವ ಚಂದ್ರಗ್ರಹಣ ಸಂಭವಿಸಲಿದೆ.

ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಬಂದಾಗ ಚಂದ್ರಗ್ರಹಣ ಉಂಟಾಗುತ್ತದೆ. ಚಂದ್ರ ಮಸುಕಾಗಿ ಕಾಣುತ್ತ ಬಳಿಕ ಕ್ರಮೇಣ ಕೆಂಪಾಗುವುದು ಚಂದ್ರಗ್ರಹಣದ ಸಂದರ್ಭದಲ್ಲಿ ನಡೆಯುತ್ತದೆ.

ಇಂದು ರಾತ್ರಿ 11.31ಕ್ಕೆ ಆರಂಭವಾಗಲಿರುವ ಈ ಭಾಗಶಃ ಚಂದ್ರಗ್ರಹಣ ಬೆಳಗ್ಗಿನ ಜಾವ 3.36 ಹಾಗೆ ಕೊನೆಯಾಗಲಿದೆ. ರಾತ್ರಿ 11.31ರ ಹಾಗೆ ಗ್ರಹಣ ಆರಂಭವಾದರೂ ಅದರ ಸಂಪೂರ್ಣ ಛಾಯೆ ಮಧ್ಯರಾತ್ರಿ ಬಳಿಕವೇ ಅಂದರೆ ರಾತ್ರಿ 1.05ರ ಹಾಗೆ ಸಂಪೂರ್ಣವಾಗಿ ಆವರಿಸಿಕೊಳ್ಳಲಿದೆ.

ಭಾನುವಾರ 2.24ರವರೆಗೂ ಇರಲಿದೆ. ಹೀಗಾಗಿ ಗ್ರಹಣದ ಈ ಅವಧಿ ಸುಮಾರು 1.19 ನಿಮಿಷದ್ದಾಗಿರಲಿದೆ. ಇಂದಿನ ಭಾಗಶಃ ಚಂದ್ರಗ್ರಹಣ ದೇಶಾದ್ಯಂತ ಗೋಚರಿಸಲಿದೆ.

ಚಂದ್ರಗ್ರಹಣ ವಿಶೇಷತೆ ಏನು..?

ಈ ಚಂದ್ರಗ್ರಹಣ ಅಶ್ವಿನಿ ನಕ್ಷತ್ರದಲ್ಲಿ ಸಂಭವಿಸಲಿದೆ. 30 ವರ್ಷಗಳಿಗೊಮ್ಮೆ ಸಂಭವಿಸಬಹುದಾದ ಅಪರೂಪ ವಿಸ್ಮಯ ಸಮಯದಲ್ಲಿ ಚಂದ್ರ ಮೇಷ ರಾಶಿಯಲ್ಲಿರಲಿದ್ದಾನೆ. ಗುರು-ಚಂದ್ರರು ಸೇರಿ ಮೇಷದಲ್ಲಿ ಗಜಕೇಸರಿ ಯೋಗ ರೂಪಿಸುವರು. ಗಜಕೇಸರಿ ಯೋಗದಲ್ಲಿ ಗ್ರಹಣ ಸಂಭವಿಸೋದ್ರಿಂದ ಕೆಲ ರಾಶಿಯವರಿಗೆ ಯೋಗ ಎಂದು ನಂಬಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version