Published
1 year agoon
By
Akkare Newsಕೇರಳ: ಎರ್ನಾಕುಲಂ ಜಿಲ್ಲೆಯ ಸಮಾವೇಶ ಕೇಂದ್ರವೊಂದರಲ್ಲಿ ಅ.29ರಂದು ಸಂಭವಿಸಿದ ಭಾರೀ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಸ್ಫೋಟದ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು.
ಎರ್ನಾಕುಲಂನ ಕನ್ವೆನ್ಷನ್ ಸೆಂಟರ್ನಲ್ಲಿ 3 ಸ್ಫೋಟ ಸಂಭವಿಸಿದೆ. ಪ್ರಾಥಮಿಕ ತನಿಖೆಯಲ್ಲಿ ಭಯೋತ್ಪಾದಕ ಕೃತ್ಯವಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.ಕಾರ್ಯಕ್ರಮದಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು, ಸ್ಥಳಕ್ಕೆ ಎನ್ಐಎ ತಂಡ ತೆರಳಿದ್ದು, ಸ್ಪೋಟದ ಬಗ್ಗೆ ತನಿಖೆ ನಡೆಸಲಿದೆ.ಕೊಚ್ಚಿಯ ಈಶಾನ್ಯಕ್ಕೆ ಸುಮಾರು 9.6 ಕಿಮೀ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ಕ್ರಿಶ್ಚಿಯನ್ ಧರ್ಮದ ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ.
ರಜೆಯಲ್ಲಿರುವ ವೈದ್ಯರು ಸೇರಿದಂತೆ ಎಲ್ಲ ಆರೋಗ್ಯ ಕಾರ್ಯಕರ್ತರಿಗೆ ಕೂಡಲೇ ಹಿಂತಿರುಗುವಂತೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸೂಚನೆ ನೀಡಿದ್ದಾರೆ. ಕಲಮಸ್ಸೆರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆ ನಿರ್ದೇಶಕರು ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಅವರು ಸೂಚಿಸಿದ್ದಾರೆ.
ವರದಿಗಳ ಪ್ರಕಾರ, ಸ್ಫೋಟದಲ್ಲಿ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಸ್ಫೋಟದ ಸ್ಥಳವನ್ನು ಸುತ್ತುವರೆದಿದ್ದಾರೆ.