Published
1 year agoon
By
Akkare Newsಮಂಗಳೂರು: ನವೆಂಬರ್ 25 ಮತ್ತು 26 ರಂದು ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಮೊದಲ ಕಂಬಳದ ಕಾರ್ಯಕ್ರಮವನ್ನು ನಟಿ ಅನುಷ್ಕಾ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದಲ್ಲಿ ನಟರಾದ ರಜನಿಕಾಂತ್, ಸುನೀಲ್ ಶೆಟ್ಟಿ, ಶಿಲ್ಪಾ ಶೆಟ್ಟಿ, ಯಶ್ ಮತ್ತು ದರ್ಶನ್ ಹಾಗೂ ಕ್ರಿಕೆಟಿಗ ಕೆಎಲ್ ರಾಹುಲ್ ಭಾಗವಹಿಸಲಿದ್ದಾರೆ ಎಂದು ಪುತ್ತೂರು ಶಾಸಕ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಅವರು ಸೋಮವಾರ ಹೇಳಿದ್ದಾರೆ.
ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಅರಮನೆ ಮೈದಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ 8 ಲಕ್ಷಕ್ಕೂ ಅಧಿಕ ಮಂದಿ ಸಾಕ್ಷಿಯಾಗುವ ನಿರೀಕ್ಷೆಯಿದೆ. ಕಂಬಳದಲ್ಲಿ ಭಾಗವಹಿಸಲು 116 ಕಂಬಳ ಕೋಣ ಮಾಲೀಕರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಈ ಮೂಲಕ ಎರಡು ದಿನಗಳ ಕಂಬಳವು ಹಲವು ದಾಖಲೆಗಳನ್ನು ಮುರಿಯುವ ಸಾಧ್ಯತೆ ಇದೆ ಎಂದಿದ್ದಾರೆ.