Published
1 year agoon
By
Akkare Newsಸುಳ್ಯ : ಕರಾವಳಿಯಲ್ಲಿ ನಿನ್ನೆ ಸುರಿದ ಧಾರಕಾರ ಮಳೆಯಿಂದಾಗಿ ಜಿಲ್ಲೆಯ ಹಲವಡೆ ಭೂ ಕುಸಿತ ಉಂಟಾಗಿದೆ. ಏಕಾಏಕಿ ಭೂ ಕುಸಿತ ಉಂಟಾಗಿ ಟ್ರಾನ್ಸ್ಫಾರ್ಮರ್ ಧರೆಗುರುಳಿದ ಘಟನೆ ಸುಳ್ಯ ಪೇಟೆಯಲ್ಲಿ ನಡೆದಿದೆ.
ನಗರದ ಪರಿವಾನಕಾನ ಉಡುಪಿ ಗಾರ್ಡನ್ ಹೋಟೆಲ್ ಬಳಿ ಭೂ ಕುಸಿತ ಉಂಟಾಗಿದ್ದು ಇದರಿಂದ ವಿದ್ಯುತ್ ಟ್ರಾನ್ಸ್ಫಾರ್ಮರ್ ಧರೆಗುರುಳಿದೆ ಇದರಿಂದ ವಿದ್ಯುತ್ ಸಂರ್ಪಕ ಕಡಿತಗೊಂಡ ಕಾರಣ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಘಟನಾ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಆಗಮಿಸಿ ಕಂಬ ತೆರವು ಕಾರ್ಯ ನಡೆಸಿದ್ದಾರೆ. ಈ ಸಂದರ್ಭ ಭೂ ಕುಸಿತದ ಉಂಟಾದ ಸ್ಥಳದ ಬಳಿ ಯಾರು ಹೋಗದಂತೆ ತಡೆಯಲಾಗಿದೆ.