ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಉಡುಪಿ

ಉಡುಪಿ ಸಮೀಪ ಒಂದೇ ಕುಟುಂಬದ 4 ಮಂದಿ ಹತ್ಯೆ ಪ್ರಕರಣ: ಆರೋಪಿ ಬಂಧನ

Published

on

 

 

 

 

 

ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿಯನ್ನು ಉಡುಪಿ ಪೊಲೀಸರು ಬೆಳಗಾವಿಯ ಕುಡಚಿಯಲ್ಲಿ ಬಂಧಿಸಿದ್ದಾರೆ‌.

ಬಂಧಿತ ಆರೋಪಿಯನ್ನು ಪ್ರವೀಣ ಚೌಗಲೇ (35) ಎಂದು ಗುರುತಿಸಲಾಗಿದೆ. ಮೊಬೈಲ್ ಟವರ್ ಆಧರಿಸಿ ಕುಡಚಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಈತ ಈ ಹಿಂದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಸಕ್ಕಿದ್ದ. ಸಿಆರ್‌ಪಿಎಫ್‌ ಸಿಬ್ಬಂದಿಯಾಗಿದ್ದ ಎನ್ನಲಾಗಿದೆ.

ಆರೋಪಿಯು ನೇಜಾರಿನ ತೃಪ್ತಿ ನಗರ ಬಡಾವಣೆಯ ಮನೆಯೊಂದಕ್ಕೆ ನುಗ್ಗಿ ಒಂದೇ ಕುಟುಂಬದ 4 ಮಂದಿಯನ್ನು ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದ. ಕೇವಲ 15 ನಿಮಿಷದಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದನು.

ಹತ್ಯೆ ನಡೆಸಿದ ನಂತರ ಎರಡು ದಿನಗಳಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದನು. ಮಂಗಳವಾರ ಮಧ್ಯಾಹ್ನ ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರ ತೆರಳಲು ಹಂತಕ ಪ್ಲ್ಯಾನ್ ಮಾಡಿಕೊಂಡಿದ್ದನು. ಈ ವೇಳೆ ಆರೋಪಿಯನ್ನು

ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement