Published
1 year agoon
By
Akkare Newsಪುತ್ತೂರು: ನವೆಂಬರ್ 25 ರಿಂದ 26 ತನಕ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರು ವಿವಿಧ ಇಲಾಖಾ ಅಧಿಕಾರಿಗಳ ಸಭೆಯನ್ನು ನಡೆಸಿದರು.
ಬೆಂಗಳೂರು ಕಂಬಳಕ್ಕೆ ಲಕ್ಷಾಂತರ ಮಂದಿ ಕಂಬಳಾಭಿಮಾನಿಗಳು ಆಗಮಿಸಲಿದ್ದು, ಮುಖ್ಯಮಂತ್ರಿ ಮತ್ತು ಸಚಿವರು, ಬಾಲಿವುಡ್ ನಟರು, ಕನ್ನಡ ಚಿತ್ರ ರಂಗದ ಪ್ರಮುಖರು, ತಮಿಳು, ತೆಳುಗು ಸೇರಿದಂತೆ ವಿವಿಧ ಭಾಷಾ ಚಲನಚಿತ್ರ ನಟರು, ವಿವಿಐಪಿಗಳು ಭಾಗವಹಿಸುವ ಕಾರಣ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯದ ರಾಜಧಾನಿಯಲ್ಲಿ ಕಂಬಳ ನಡೆಯುತ್ತಿದ್ದು ಇದೇ ಮೊದಲ ಬಾರಿಗೆ ಎಂಬಂತೆ ರಾಜಧಾನಿಯಲ್ಲಿ ಆಹೋರಾತ್ರಿ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಾಂತರ ಮಂದಿ ಭಾಗವಹಿಸುವ ಕಾರಣಕ್ಕೆ ಟ್ರಾಫಿಕ್ ಸಮಸ್ಯೆ, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ, ಬಿಬಿಎಂಪಿ ಅರಣ್ಯ ಇಲಾಖೆ ಸೇರಿದಂತೆ ಕಂಬಳ ಕಾರ್ಯಕ್ರಮಕ್ಕೆ ಸಂಬಂದಿಸಿದಂತೆ ಅಧಿಕಾರಿಗಳ ಸಭೆಯನ್ನು ಕರೆದು ಅವರ ಜೊತೆ ಚರ್ಚೆ ನಡೆಸಿದರು. ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಲಾಖಾ ಅಧಿಕಾರಿಗಳಿಗೆ ಸ್ಪೀಕರ್ ರವರು ಮಾಹಿತಿ ಮತ್ತು ಸೂಚನೆಯನ್ನು ನೀಡಿದರು. ಸಭೆಯಲ್ಲಿ ಕಂಬಳ ಸಮಿತಿಯ ಗೌರವ ಅಧ್ಯಕ್ಷರು ಬಂಜಾರಾ ಗ್ರೂಪ್ ನ ಪ್ರಕಾಶ್ ಶೆಟ್ಟಿ, ಉಪಾಧ್ಯಕ್ಷರಾದ ಗುಣರಂಜನ್ ಶೆಟ್ಟಿ, ಕಾರ್ಯಧ್ಯಕ್ಷರಾದ ಗುರುಕಿರಣ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಬೆಂಗಳೂರು ಕಂಬಳಕ್ಕೆ ಲಕ್ಷಾಂತರ ಮಂದಿ ಭಾಗವಹಿಸುವ ಕಾರಣ ಕೈಗೊಳ್ಳಬೇಕಾದ ಇಲಾಖಾವಾರು ವ್ಯವಸ್ಥೆಗಳ ಬಗ್ಗೆ ತಿಳಿಸಲು ಅಧಿಕಾರಿಗಳ ಸಭೆಯನ್ನು ಕರೆಯಲಾಗಿತ್ತು. ಪ್ರಮುಖ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಖ್ಯಾತರು ಭಾಗವಹಿಸಲಿದ್ದಾರೆ. ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಬಗ್ಗೆಯೂ ಅಧಿಕಾರಿಗಳಿಗೆ ತಿಳಿಸಲಾಗಿದೆ. ಇದೇ ಮೊದಲ ಬಾರಿಗೆ ಆಹೋರಾತ್ರಿ ಕಾರ್ಯಕ್ರಮ ನಡೆಯುತ್ತಿದ್ದು ಅಗತ್ಯ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಯಿತು.
ಅಶೋಕ್ ರೈ ಅಧ್ಯಕ್ಷರು, ಕಂಬಳ ಸಮಿತಿ, ಶಾಸಕರು ಪುತ್ತೂರು.