Published
2 years agoon
By
Akkare News
ಮುಂಬೈ: ಸದ್ಯ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ವಿಶ್ವದಾಖಲೆಯ ಶತಕ ಸಿಡಿಸಿರುವ ವಿರಾಟ್ ಕೊಹ್ಲಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಏಕದಿನ ಕ್ರಿಕೆಟ್‌ನ 50ನೇ ಶತಕ ಸಿಡಿಸುವ ಮೂಲಕ ಕೊಹ್ಲಿ ಕ್ರಿಕೆಟ್ ಆರಾಧ್ಯ ದೈವ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿದಿದ್ದಾರೆ.
ಕೊಹ್ಲಿ ಶತಕ ಸಂಭ್ರಮವನ್ನು ವಿಶ್ವದಾದ್ಯಂತ ಅಭಿಮಾನಿಗಳು ಕೊಂಡಾಡುತ್ತಿದ್ದಾರೆ. ಹಿರಿಯ ಕ್ರಿಕೆಟಿಗರಿಂದಲೂ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಈ ನಡುವೆ ಪಾಕ್ ಮಾಜಿ ಕ್ರಿಕೆಟಿಗ ಮಾಸಿಂ ಅಕ್ರಮ್ ಕೊಹ್ಲಿಗೆ ʻಚಕ್ರವರ್ತಿʼ ಎಂಬ ಬಿರುದು ನೀಡಿದ್ದಾರೆ.