Published
1 year agoon
By
Akkare Newsಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ದೀಪಾವಳಿಯ ಶುಭ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದ್ದು, NPS ರದ್ಧು ಮಾಡಿ Old Pension Scheme ಜಾರಿ ಮಾಡಲು ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ತಿಳಿಸಿದೆ.
ಹೌದು, ರಾಜ್ಯದ ಸರ್ಕಾರಿ ನೌಕರರು ಬಹುದಿನದ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು ಕಾಂಗ್ರೆಸ್ ಸರ್ಕಾರವು ಚುನಾವಣಾ ಪೂರ್ವದಲ್ಲಿ ತಾನು ನೀಡಿದ ಭರವಸೆಯನ್ನು ನೆರವೇರಿಸಲು ಮುಂದಾಗಿದೆ. ಯಾಕೆಂದರೆ ಸದ್ಯದ ಮಾಹಿತಿ ಪ್ರಕಾರ ಕರ್ನಾಟಕ ಸರ್ಕಾರ ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಕುರಿತು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಗಳು ಆರ್ಥಿಕ ಇಲಾಖೆಗೆ ಪತ್ರವನ್ನು ಬರೆದಿದ್ದಾರೆ.
ಅಂದ ಹಾಗೆ NPS ನೌಕರರ ಸಮಾವೇಶ ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿದ್ದು ಈ ಸಮಾವೇಶದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ NPS ರದ್ದು ಮಾಡುವ ಕುರಿತು ಘೋಷಣೆ ಮಾಡುವ ನಿರೀಕ್ಷೆ ಇದೆ. ಒಟ್ಟಿನಲ್ಲಿ ಸದ್ಯದಲ್ಲೇ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಮಾತ್ರ ಸಿಗಲಿದೆ.