ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಕಂಬಳಕ್ಕೆ ಸಂಸದ ಬ್ರಿಚ್ ಭೂಷನ್ ಸಿಂಗ್ ಗೆ ಕೋಕ್ : ವಿವಾದಕ್ಕೆ ತೆರೆ ಎಳೆದ ಅಶೋಕ್ ರೈ

Published

on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆಗೊಂಡ ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರು ಆಗಮಿಸುವುದಿಲ್ಲ ಎಂದು ಪುತ್ತೂರು ಕಾಂಗ್ರೆಸ್‌ ಶಾಸಕ ಮತ್ತು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ರೈ ತಿಳಿಸಿದ್ದಾರೆ.

 

ಇದು ದೊಡ್ಡ ಕಾರ್ಯಕ್ರಮ ಆಗಿರುವ ಕಾರಣ ಬೇರೆ ಬೇರೆ ಸಂಘಟನೆಯವರು ಬಂದು ಅನೇಕ ಮನವಿ ಮಾಡುತ್ತಾರೆ. ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಬಂದು ವೇದಿಕೆಗೆ ಅವರ ಹೆಸರನ್ನು ಇಡಲು ಹೇಳುತ್ತಾರೆ. ಸಿದ್ದಿ ಜನಾಂಗದವರು ಬಂದು ಅವರನ್ನು ಆಹ್ವಾನಿಸುವಂತೆ ಕೇಳಿದ್ದರು. ಆದರೆ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಮೊನ್ನೆಯೇ ನಾನು ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಹೇಳಿದರು.

 

ನವೆಂಬರ್ 25 ಮತ್ತು 26ರಂದು ಅರಮನೆ ಮೈದಾನದಲ್ಲಿ ಕಂಬಳ ಆಯೋಜನೆಗೊಂಡಿದೆ. ಕುಸ್ತಿಪಟುಗಳಿಗೆ ನಡೆಯಲಿರುವ ಸನ್ಮಾನ ಕಾರ್ಯಕ್ರಮಕ್ಕೆ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಿತ್ತು.

 

ಈ ಪ್ರತಿಭಟನೆಯ ಸಮಯದಲ್ಲಿ ಕಾಂಗ್ರೆಸ್ ಕ್ರೀಡಾಪಟುಗಳ ಪರವಾಗಿ ಮಾತನಾಡಿತ್ತು. ಈಗ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಈ ಕಂಬಳಕ್ಕೆ 1 ಕೋಟಿ ರೂ. ಅನುದಾನ ನೀಡುವುದಾಗಿ ಪ್ರಕಟಿಸಿದೆ. ಹೀಗಿರುವಾಗ ಈ ಕಾರ್ಯಕ್ರಮಕ್ಕೆ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರನ್ನು ಆಹ್ವಾನಿಸಿದ್ದು ಎಷ್ಟು ಸರಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆಯನ್ನು ಜನ ಕೇಳುತ್ತಿದ್ದಾರೆ.

 

ಗೋವಾದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದ ಕುಸ್ತಿಪಟುಗಳು ಪದಕ ಗೆದ್ದಿದ್ದಾರೆ. ಭಾರತೀಯ ಕುಸ್ತಿ ಫೆಡರೇಶನ್‌ನಿಂದ ವಿಜೇತರನ್ನು ಸಂಸದ ಬ್ರಿಜ್ ಭೂಷಣ್ ಅವರು ಅಭಿನಂದಿಸಲು ಬಯಸಿದ್ದರು. ಸಿದ್ಧಿ ಸಮುದಾಯದ ಬೇಡಿಕೆಯನ್ನಾಧರಿಸಿ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಆರಂಭದಲ್ಲಿ ಸಂಘಟಕರು ಸ್ಪಷ್ಟನೆ ನೀಡಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version