ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
1 year agoon
By
Akkare Newsಬೆಂಗಳೂರು : ನ.25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಸ್ಪರ್ಧೆ ನಡೆಯಲಿದೆ.ಪುತ್ತೂರು ಶಾಸಕ ಅಶೋಕ್ ರೈಗಳ ಸಾರಥ್ಯದಲ್ಲಿ ಬೆಂಗಳೂರು ಕಂಬಳಕ್ಕೆ ಸಕಲ ಸಿದ್ದತೆ ನಡೆಯುತ್ತಿದೆ. 2023-24ರ ಕಂಬಳ ಸೀಸನ್ ಈಗಾಗಲೇ ಆರಂಭವಾಗಿದ್ದು, ಬಂಟ್ವಾಳ ತಾಲೂಕಿನ ಕಕ್ಯಪದವು ಎಂಬಲ್ಲಿ ಮೊದಲ ಕಂಬಳ ನಡೆದಿದೆ. 189 ಜೋಡಿ ಕೋಣಗಳು ಈ ಕೂಟದಲ್ಲಿ ಭಾಗವಹಿಸಿದ್ದವು. ಇದೀಗ ಈ ಕೋಣಗಳು ಬೆಂಗಳೂರು ಲಾರಿ ಏರಲು ಸಿದ್ದವಾಗಿವೆ.
ಗುರುವಾರ (ನ.23) ಎಲ್ಲಾ ಓಟದ ಕೋಣಗಳೊಂದಿಗೆ ಯಜಮಾನರುಗಳು ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಗುರುವಾರ ಬೆಳಗ್ಗೆ 9 ಗಂಟೆಯ ಸುಮಾರಿಗೆ ಉಪ್ಪಿನಂಗಡಿಯ ಕಾಲೇಜು ಮೈದಾನದಲ್ಲಿ ಸೇರಲಿದ್ದಾರೆ. ಅಲ್ಲಿ ಗಣಹೋಮ ನಡೆದು, ಬಳಿಕ ಉಪಹಾರ ಸೇವಿಸಿ 10.30ಕ್ಕೆ ಸರಿಯಾಗಿ ಬೆಂಗಳೂರು ಕಡೆ ಪ್ರಯಾಣ ಆರಂಭಿಸಲಿದ್ದಾರೆ. ಇದಕ್ಕಾಗಿ ಶಾಸಕರ ನೇತೃತ್ವದಲ್ಲಿ ತಯಾರಿ ನಡೆಯುತ್ತಿದ್ದು, ಸ್ಥಳೀಯ ಸಾಮಾಜಿಕ ಮುಂದಾಳುಗಳು ಸಾಥ್ ನೀಡಲಿದ್ದಾರೆ.
ಓಟದ ಕೋಣಗಳಿಗೆ ಅನುಕೂಲವಾಗುವಂತೆ ಕರಾವಳಿಯಿಂದಲೇ ನೀರು, ಬೈಹುಲ್ಲು, ಹುರುಳಿಯನ್ನು ಬೆಂಗಳೂರಿಗೆ ಕೊಂಡೊಯ್ಯಲಾಗುತ್ತದೆ. ನೂರಕ್ಕೂ ಹೆಚ್ಚು ಲಾರಿಗಳು ಸಾಲಾಗಿ ಕರಾವಳಿಯ ಸಾಂಸ್ಕೃತಿಕ ಮೆರುಗನ್ನು ಹೊತ್ತು ರಾಜಧಾನಿಯತ್ತ ಸಾಗಲಿವೆ.
ಗುರುವಾರ ಮಧ್ಯಾಹ್ನ 2 ಗಂಟೆಯಿಂದ ಐದು ಗಂಟೆಯ ತನಕ ವಿರಾಮ ನೀಡಲಾಗಿದೆ. ಅಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ನೇತೃತ್ವದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನದ ಊಟೋಪಚಾರವೂ ಇಲ್ಲೇ ನಡೆಯಲಿದೆ. ಈ ವೇಳೆ ಕೋಣಗಳನ್ನು ಲಾರಿಯಿಂದ ಇಳಿಸಿ ವಿಶ್ರಾಂತಿ ನೀಡಲಾಗುವುದು.
ಸಂಜೆ ಐದು ಗಂಟೆಯಿಂದ ಹಾಸನದಿಂದ ಹೊರಟ ಕೋಣಗಳಿಗೆ ಚನ್ನರಾಯಪಟ್ಟಣದಲ್ಲಿ ಸ್ವಾಗತ ನೀಡಲಾಗುವುದು. ಬಳಿಕ ನೆಲಮಂಗಲ ಬೆಂಗಳೂರು ಪ್ರವೇಶಿಸಿ ಸುಮಾರು 11 ಗಂಟೆಗೆ ಅರಮನೆ ಮೈದಾನಕ್ಕೆ ಆಗಮಿಸಲಿದೆ.
ಈಗಾಗಲೇ 179 ಜೋಡಿ ಕೋಣಗಳ ಯಜಮಾನರು ಬೆಂಗಳೂರು ಕಂಬಳಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಕಕ್ಯಪದವು ಕಂಬಳದಲ್ಲಿ ಅವುಗಳ ಓಟವನ್ನು ಪರಿಶೀಲಿಸಿ ಪರಿಷ್ಕರಣೆ ಮಾಡಲಾಗುತ್ತಿದೆ.