ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಯನ್ನು ಶ್ಲಾಘಿಸಿದ ಸವಾದ್

Published

on

 

 

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ 6 ತಿಂಗಳ ಅವಧಿಯನ್ನು ಪೂರ್ಣಗೊಳಿಸಿದ್ದು, ಈ ಅವಧಿಯಲ್ಲಾದ ಪ್ರಮುಖ ಸಾಧನೆಗಳ ಪೈಕಿ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸಾಧನೆಯನ್ನು ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ ಶ್ಲಾಘಿಸಿದ್ದಾರೆ.

ಇತ್ತೀಚಿಗೆ 60 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ, ಸುಮಾರು 45.45 ಲಕ್ಷ ವಿದ್ಯಾರ್ಥಿಗಳಿಗೆ ಸಮವಸ್ತ್ರ, 58.28 ಲಕ್ಷ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಠಿಕ ಆಹಾರ, 45 ಸಾವಿರ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಮತ್ತು ನೀರು ಪೂರೈಕೆ, ಕೆಎಸ್ಸಾರ್ಟಿಸಿ ಸಿಬ್ಬಂದಿಗಳ ಮಕ್ಕಳಿಗೆ ಸುಮಾರು 33750ರ ವರೆಗೆ ವಿದ್ಯಾರ್ಥಿ ವೇತನವನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. ಅಲ್ಲದೆ, ಶಕ್ತಿ ಯೋಜನೆಯಲ್ಲಿ ಸುಮಾರು 70 ಲಕ್ಷ ವಿದ್ಯಾರ್ಥಿನಿಯರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಈ ಎಲ್ಲಾ ಮಹತ್ವಾಕಾಂಕ್ಷಿ ಯೋಜನೆಗಳಿಂದ ಗ್ರಾಮೀಣ ಹಾಗೂ ಅತ್ಯಂತ ಹಿಂದುಳಿದ ಪ್ರದೇಶಗಳ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಲು ಕಾರಣವಾಗಿದ್ದು, ಇದಕ್ಕಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರಿಗೆ ವಿದ್ಯಾರ್ಥಿಗಳ ಪರವಾಗಿ ಸವಾದ್ ಸುಳ್ಯ ಪತ್ರಿಕಾ ಪ್ರಕಟಣೆಯಲ್ಲಿ ಅಭಿನಂದಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version