ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ 1986ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ನೇಮಕಗೊಂಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಾಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ನವೆಂಬರ್ 30ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.
ಅದೇ ದಿನ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇನ್ನು ಈ ನೇಮಕ ಆದೇಶದ ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಗೋಯಲ್ ಕೃತಜ್ಞತೆ ಸಲ್ಲಿಸಿದರು. ಸಿಎಂ ಶುಭ ಹಾರೈಸಿದರು