ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈPublished
3 years agoon
By
Akkare News
ಬೆಂಗಳೂರು: ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಂಬಳ ಸ್ಪರ್ಧೆ ನಡೆಯುತ್ತಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಅರಮನೆ ಮೈದಾನದಲ್ಲಿ ಕಂಬಳ ಅದ್ದೂರಿ ಚಾಲನೆ ನೀಡಲಿದ್ದು. ಇಂತಹ ಐತಿಹಾಸಿಕ ಕ್ಷಣಕ್ಕೆ ರಾಜಧಾನಿಯ ನೆಲ ಸಾಕ್ಷಿಯಾಗಲಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಮೊಟ್ಟ ಮೊದಲ ಕಂಬಳಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕಂಬಳದ ಸೊಬಗನ್ನು ಸವಿಯಲು ಸಿಲಿಕಾನ್ ಸಿಟಿ ಮಂದಿ ಕಾತರದಿಂದ ಕಾಯುತ್ತಿದ್ದಾರೆ.
ಬೆಂಗಳೂರು ಕಂಬಳದ ವ್ಯವಸ್ಥೆ ಹೇಗಿದೆ ನೋಡೋಣ ಬನ್ನಿ…
ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ 8 ಸಾವಿರ ಜನ ಗ್ಯಾಲರಿಯಲ್ಲಿ ಕುಳಿತು ನೋಡೋ ವ್ಯವಸ್ಥೆ ಮಾಡಲಾಗಿದೆ. ಆದ್ರೆ 10 ಲಕ್ಷ ಜನ್ರು ಬರುವ ನಿರೀಕ್ಷೆ ಇದೆ. ಪೊಲೀಸ್ 11 ಲಕ್ಷ ಜನ ಇರ್ತಾರೆ ಅನ್ನೊ ಮಾಹಿತಿ ಇದೆ. ಪಾರ್ಕಿಂಗ್ ವ್ಯವಸ್ಥೆ ಸಹ ಮಾಡಲಾಗಿದೆ.
KSRTCಯಿಂದ ೧೫೦ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಸ್ವಯಂ ಸೇವಕರ ವ್ಯವಸ್ಥೆ ಮಾಡಲಾಗಿದ್ದು ಟ್ರಾಫಿಕ್ ಮಾನಿಟರಿಂಗ್ ಕೂಡ ಮಾಡಲಾಗುತ್ತೆ. 8 ಸೆಗ್ಮೆಂಟ್ನಲ್ಲಿ ಕಂಬಳ ನಡೆಯಲಿದೆ. ನೇಗಿಲು ಹಿರಿಯ, ನೇಗಿಲು ಕಿರಿಯ, ಹಲಗೆ ವಿಭಾಗದಲ್ಲಿ ಕಂಬಳ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ