ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಕಂಬಳ ನೋಡಿಕೊಂಡು ವಾಪಸಾಗುತ್ತಿದ್ದವರ ಕಾರಿಗೆ ಲಾರಿ ಡಿಕ್ಕಿ : ಮಂಗಳೂರಿನ ಇಬ್ಬರು ಸಾವು

Published

on

ಮಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳ ನೋಡಿಕೊಂಡು ವಾಪಸಾಗುತ್ತಿದ್ದ ಮಂಗಳೂರಿನ ಯುವಕರ ಲಾರಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂರು ಮಂದಿ ಗಾಯಗೊಂಡಿರುವ ಘಟನೆ ಕುಣಿಗಲ್ ಸಮೀಪ ರಾಜ್ಯ ಹೆದ್ದಾರಿ 33 ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿಪಾಳ್ಯ ಗ್ರಾಮದ ಬಳಿ ಇಂದು ಮುಂಜಾನೆ ಸಂಭವಿಸಿದೆ.

ಮಂಗಳೂರಿನ ಬಜಪೆಯ ಕಿಶನ್ ಶೆಟ್ಟಿ (20), ಭಟ್ಟರತೋಟ ಗ್ರಾಮದ ಫಿಲೀಪ್ ನೇರಿ ಲೋಬೋ (32) ಮೃತ ದುರ್ಧೈವಿಗಳು. ನಿತೀಶ್ ಭಡಾರಿ, ಪ್ರೀತಿ ಲೋಬೊ, ಹರೀಶ್ ತೀವ್ರವಾಗಿ ಗಾಯಗೊಂಡು ಅದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ನಡೆಯುತ್ತಿದ್ದ ಕಂಬಳವನ್ನು ನೋಡಿಕೊಂಡು ಊರಿಗೆ ಮಂಗಳೂರಿಗೆ ವಾಪಸ್ ಬರುತ್ತಿದ್ದ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೊಗುತ್ತಿದ್ದ ಲಾರಿ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

ಕಿಶನ್ ಶೆಟ್ಟಿ ಹಾಗೂ ಅವರ ಸ್ನೇಹಿತರು ನೆಲಮಂಗಲ ಹಾಗೂ ಕುಣಿಗಲ್ ಮಾರ್ಗವಾಗಿ ಮಂಗಳೂರಿಗೆ ಹೋಗಬೇಕಾಗಿತ್ತು. ಆದರೆ ದಾರಿ ತಪ್ಪಿ ತುಮಕೂರಿಗೆ ಹೋಗಿ ಬಳಿಕ ಹೆಬ್ಬೂರು ಮಾರ್ಗವಾಗಿ ಕುಣಿಗಲ್ ನಿಂದ ಮಂಗಳೂರಿಗೆ ತೆರಳುತ್ತಿರುವಾಗ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version