ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ವಿಷಕಾರಿ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಮೃತ್ಯು

Published

on

 

ಪುತ್ತೂರು: ತೋಟಕ್ಕೆ ಬಳಸುವ ವಿಷಕಾರಿ ಕೀಟನಾಶಕ ಸೇವಿಸಿದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ  ಸಾವನ್ನಪ್ಪಿರುವ ಘಟನೆ ಪುತ್ತೂರರಿನಲ್ಲಿ  ನಡೆದಿದೆ.

 

ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡರ ಪುತ್ರಿ ನಿಶಾ (17) ಮೃತ ಯುವತಿ. ನಿಶಾ ಬಿ ಎಮ್ ರವರು ಪುತ್ತೂರು ನಗರರ ಖಾಸಗಿ ಕಾಲೇಜಿನ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

 

ಹದಿನೈದು ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ (ಓಟ ಸ್ಪರ್ಧೆ) ಭಾಗವಹಿಸಿ ಅಲ್ಲಿ ಯಾವುದೇ ಬಹುಮಾನ ದೊರೆಯದೇ ಹಿಂತಿರುಗಿ ಮನೆಗೆ ಬಂದವರು ಬೇಸರದಲ್ಲಿದ್ದು ನ.14 ರಂದು ವಿಪರೀತವಾಗಿ ವಾಂತಿ ಮಾಡುತ್ತಿದ್ದು, ಇದರಿಂದ ಅಸ್ವಸ್ಥಳಾದವಳನ್ನು ಈ ಬಗ್ಗೆ ವಿಚಾರಿಸಿದಾಗ ನ.13 ರಂದು ಸಂಜೆ ತೋಟಕ್ಕೆ ಬೀಡುವ ಕೀಟನಾಶಕವನ್ನು ಸೇವಿಸಿರುವುದಾಗಿ ತಿಳಿಸಿದ್ದು, ನಂತರ ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರಲ್ಲಿ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಯ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದರು.

 

ನ.25 ರಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ನಿಶಾ ಬಿ ಎಮ್ ರವರು ಮೃತಪಟ್ಟಿದ್ದಾರೆ.  ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement