ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈPublished
3 years agoon
By
Akkare News
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಡಿ.1ರಂದು ಶುಕ್ರವಾರ ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ಸಂಬಂಧ ದೆಹಲಿಗೆ ತೆರಳಲಿದ್ದಾರೆ. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಬಳಿಕ ಮತ್ತು ಅಶೋಕ್ ಅವರು ಪ್ರತಿಪಕ್ಷದ ನಾಯಕರಾದ ನಂತರ ಇದೇ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.
ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಧನ್ಯವಾದ ತಿಳಿಸುವುದರ ಜತೆಗೆ ಕೋರ್ ಕಮಿಟಿ ಪುನಾರಚನೆ, ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ, ವಿಧಾನಸಭೆಯ ಉಪನಾಯಕ, ಮುಖ್ಯ ಸಚೇತಕ, ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ, ಉಪನಾಯಕ ಮತ್ತು ಮುಖ್ಯ ಸಚೇತಕ ಹುದ್ದೆಗಳಿಗೆ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸುವ ಸಾಧ್ಯತೆಯಿದೆ ಎಂದು ಮುೂಲಗಳು ತಿಳಿಸಿವೆ.ಅಲ್ಲದೆ, ಉಭಯ ನಾಯಕರ ನೇಮಕಕ್ಕೆ ಸಂಬಂಧಿಸಿದಂತೆ ಬೃಹತ್ ಸಮಾವೇಶ ಆಯೋಜಿಸುವ ಉದ್ದೇಶವನ್ನು ಹೊಂದಲಾಗಿದೆ