ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
1 year agoon
By
Akkare Newsಪುತ್ತೂರು:ಡಿ.8 ಆಯೋಗವು ಅಧಿಸೂಚನೆ ಹೊರಡಿಸಲಿದೆ. ಪುತ್ತೂರು ನಗರ ಸಭೆಯಲ್ಲಿ ಇಬ್ಬರು ಹಾಲಿ ಸದಸ್ಯರ ಅಕಾಲಿಕ ನಿಧನದಿಂದ ಎರಡು ಸ್ಥಾನ ಖಾಲಿಯಿದ್ದು, ಅದಕ್ಕೂ ಚುನಾವಣೆ ದಿನ, ಚುನಾವಣೆ ನಡೆಯಲಿದೆ.
ಡಿ.8 ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಗೊಳಿಸಲಿದ್ದು ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ.
ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ. ಡಿ.27ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ.ಅವಶ್ಯವಿದ್ದರೆ ಡಿ.29ರಂದು ಮರುಮತದಾನ ನಡೆದು ಡಿ.30ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.
ನಗರಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್‌ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8ರಿಂದ 30ರ ತನಕ ಜಾರಿಯಲ್ಲಿರಲಿದೆ.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಸ್ಪರ್ಧೆಯಿಂದ ಪುತ್ತೂರು ಕ್ಷೇತ್ರ ರಾಜ್ಯದ ಗಮನ ಸೆಳೆದಿತ್ತು. ಇದರಿಂದ ಬಿಜೆಪಿ ಮತ ವಿಭಜನೆಗೊಂಡು ಇಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿತ್ತು. ಅದಾದ ಬಳಿ ನಡೆದ ಎರಡು ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ತ್ರಿಕೋನ ಸ್ಪರ್ಧೆ ಮುಂದುವರಿದಿತ್ತು. ಕಾಂಗ್ರೆಸ್ ಬಿಜೆಪಿ ಜತೆ ಪುತ್ತಿಲ ಪರಿವಾರ ಕೂಡ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಇದರಲ್ಲಿ ಕಾಂಗ್ರೆಸ್ ಹಾಗೂ ಪುತ್ತಿಲ ಪರಿವಾರ ತಲಾ 1 ಸ್ಥಾನ ಗೆದ್ದಿತ್ತು ಎರಡು ಸ್ಥಾನಗಳಲ್ಲೂ ಬಿಜೆಪಿ 3 ನೇ ಸ್ಥಾನಕ್ಕೆ ಕುಸಿದಿತ್ತು.
ಬಿಜೆಪಿ ಹಾಗೂ ಪುತ್ತಿಲ ಪರಿವಾರದ ನಡುವಿನ ತಿಕ್ಕಾಟ 6 ತಿಂಗಳು ಕಳೆದರೂ ಮುಗಿದಿಲ್ಲ. ಇತ್ತಂಡಗಳ ನಡುವೆ ಹಲವು ಸುತ್ತಿನ ಮಾತುಕತೆ ಕಂಡರೂ ತಾರ್ಕಿಕ ಅಂತ್ಯ ಕಂಡಿಲ್ಲ. ಇನ್ನೂ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪುತ್ತಿಲ ಪರಿವಾರ ಪರ್ಯಾರ ರಾಜಕೀಯ ಶಕ್ತಿಯಾಗುವತ್ತ ಮುನ್ನಡಿ ಇಟ್ಟಿದೆ. ಹೀಗಾಗಿ ಮುಂಬರುವ ನಗರ ಸಭೆ ಚುನಾವಣೆಯಲ್ಲೂ ಪುತ್ತಿಲ ಪರಿವಾರ ತನ್ನ ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ ದಟ್ಟವಾಗಿದೆ.