ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ತೆರವಾದ ಸ್ಥಾನಗಳಿಗೆ ಉಪ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಡಿ.27 ರಂದು ದಿನಾಂಕ ಘೋಷಣೆ .

Published

on

ಪುತ್ತೂರು:ಡಿ.8 ಆಯೋಗವು ಅಧಿಸೂಚನೆ ಹೊರಡಿಸಲಿದೆ. ಪುತ್ತೂರು ನಗರ ಸಭೆಯಲ್ಲಿ ಇಬ್ಬರು ಹಾಲಿ ಸದಸ್ಯರ ಅಕಾಲಿಕ ನಿಧನದಿಂದ ಎರಡು ಸ್ಥಾನ ಖಾಲಿಯಿದ್ದು, ಅದಕ್ಕೂ ಚುನಾವಣೆ ದಿನ, ಚುನಾವಣೆ ನಡೆಯಲಿದೆ.

ಡಿ.8 ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಗೊಳಿಸಲಿದ್ದು ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ.
ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ. ಡಿ.27ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ.ಅವಶ್ಯವಿದ್ದರೆ ಡಿ.29ರಂದು ಮರುಮತದಾನ ನಡೆದು ಡಿ.30ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.

ನಗರಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್‌ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8ರಿಂದ 30ರ ತನಕ ಜಾರಿಯಲ್ಲಿರಲಿದೆ.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಸ್ಪರ್ಧೆಯಿಂದ ಪುತ್ತೂರು ಕ್ಷೇತ್ರ ರಾಜ್ಯದ ಗಮನ ಸೆಳೆದಿತ್ತು. ಇದರಿಂದ ಬಿಜೆಪಿ ಮತ ವಿಭಜನೆಗೊಂಡು ಇಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿತ್ತು. ಅದಾದ ಬಳಿ ನಡೆದ ಎರಡು ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ತ್ರಿಕೋನ ಸ್ಪರ್ಧೆ ಮುಂದುವರಿದಿತ್ತು. ಕಾಂಗ್ರೆಸ್ ಬಿಜೆಪಿ ಜತೆ ಪುತ್ತಿಲ ಪರಿವಾರ ಕೂಡ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಇದರಲ್ಲಿ ಕಾಂಗ್ರೆಸ್ ಹಾಗೂ ಪುತ್ತಿಲ ಪರಿವಾರ ತಲಾ 1 ಸ್ಥಾನ ಗೆದ್ದಿತ್ತು ಎರಡು ಸ್ಥಾನಗಳಲ್ಲೂ ಬಿಜೆಪಿ 3 ನೇ ಸ್ಥಾನಕ್ಕೆ ಕುಸಿದಿತ್ತು.

ಬಿಜೆಪಿ ಹಾಗೂ ಪುತ್ತಿಲ ಪರಿವಾರದ ನಡುವಿನ ತಿಕ್ಕಾಟ 6 ತಿಂಗಳು ಕಳೆದರೂ ಮುಗಿದಿಲ್ಲ. ಇತ್ತಂಡಗಳ ನಡುವೆ ಹಲವು ಸುತ್ತಿನ ಮಾತುಕತೆ ಕಂಡರೂ ತಾರ್ಕಿಕ ಅಂತ್ಯ ಕಂಡಿಲ್ಲ. ಇನ್ನೂ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪುತ್ತಿಲ ಪರಿವಾರ ಪರ್ಯಾರ ರಾಜಕೀಯ ಶಕ್ತಿಯಾಗುವತ್ತ ಮುನ್ನಡಿ ಇಟ್ಟಿದೆ. ಹೀಗಾಗಿ ಮುಂಬರುವ ನಗರ ಸಭೆ ಚುನಾವಣೆಯಲ್ಲೂ ಪುತ್ತಿಲ ಪರಿವಾರ ತನ್ನ ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ ದಟ್ಟವಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version