ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಡಿ.27 ಪುತ್ತೂರು ನಗರ ಸಭೆಯ ತೆರವಾದ ಎರಡು ಸ್ಥಾನಗಳಿಗೆ ಉಪ ಚುನಾವಣೆ

Published

on

ಪುತ್ತೂರು : ಸ್ಥಳೀಯ ಸಂಸ್ಥೆಗಳಲ್ಲಿ ತೆರವಾದ ಸ್ಥಾನಗಳಿಗೆ ಉಪಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗಿದ್ದು, ಪುತ್ತೂರು ನಗರಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ಮತದಾನ ನಿಗದಿಗೊಳಿಸಿ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ

ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಡಿ.8 ರಂದು ಜಿಲ್ಲಾಧಿಕಾರಿಗಳು ಅದಿಸೂಚನೆ ಪ್ರಕಟಗೊಳಿಸಲಿದ್ದು, ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ. ಡಿ.27ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರು‌ಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ

 

  • ಡಿ.8 ಅಧಿಸೂಚನೆ ಪ್ರಕಟ
  • ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನ
  • ಡಿ.16 ನಾಮಪತ್ರ ಪರಿಶೀಲನೆ
  • ಡಿ.18 ನಾಮಪತ್ರ ಹಿಂಪಡೆಯಲು ಅಂತಿಮ ದಿನ
  • ಡಿ.27 ಮತದಾನ
  • ಡಿ.30 ಮತ ಎಣಿಕೆ

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version