Published
1 year agoon
By
Akkare Newsಬಡಗನ್ನೂರು : ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮವು ಡಿ.9 ರಂದು ಸಂಜೆ 6.30 ರಿಂದ ನಡೆಯಲಿರುವುದು.ಡಿ.9 ರಂದು ಅಪರಾಹ್ನ ಗಂ 3 ರಿಂದ ವಿವಿಧ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ,ಸಂಜೆ 6 ರಿಂದ ಮಕ್ಕಳ ಕುಣಿತ ಭಜನೆ 6.30 ರಿಂದ ಶ್ರೀ ದೇವರಿಗೆ ಕಾರ್ತಿಕ ಪೂಜೆ, ಲಕ್ಷ ದೀಪೋತ್ಸವ, ಮಹಾಪೂಜೆ ಪ್ರಸಾದ್ ವಿತರಣೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಕ್ತಾಧಿಗಳು ಅಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಪಟ್ಟೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.