Published
1 year agoon
By
Akkare Newsಪುತ್ತೂರು: ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಉಬರಡ್ಕ ನೇಮಕಗೊಂಡಿದ್ದಾರೆ.
ಮಹಾ ಒಕ್ಕೂಟದ ರಾಜ್ಯಾಧ್ಯಕ್ಷರಾದ ಕಾಡಶೆಟ್ಟಿಹಳ್ಳಿ ಸತೀಶ್ ಅವರು ಈ ನೇಮಕ ಮಾಡಿದ್ದಾರೆ. ಹರೀಶ್ ಉಬರಡ್ಕ ಅವರು ನಾಲ್ಕು ಬಾರಿ ಉಬರಡ್ಕ ಗ್ರಾಪಂನ ಅಧ್ಯಕ್ಷರಾಗಿ, ಸದಸ್ಯರಾಗಿ, ಸಹಕಾರಿ ಸಂಘದ ನಿರ್ದೇಶಕರಾಗಿ, ಸುಳ್ಯ ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ, ವಿವಿಧ ಸಂಘ – ಸಂಸ್ಥೆಗಳಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದಾರೆ.
ಬೆಂಗಳೂರಿನ ಕುಮಾರ ಪಾರ್ಕ್ ಪೂರ್ವದಲ್ಲಿರುವ ಗಾಂಧಿ ಭವನದಲ್ಲಿ ನಡೆದ ಮಹಾ ಒಕ್ಕೂಟ ರಾಜ್ಯ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು. ಎರಡೂವರೆ ವರ್ಷಗಳ ರಾಜ್ಯದ ವಿವಿಧ ಜಿಲ್ಲೆಗಳ ಮತ್ತು ರಾಜ್ಯದ ಪದಾಧಿಕಾರಿಗಳ ಕಾರ್ಯ ಚಟುವಟಿಕೆಗಳನ್ನು ಪರಾಮರ್ಶಿಸುವುದರ ಜತೆಗೆ ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳು ಸ್ಥಳೀಯ ಸ್ವಯಂ ಸರಕಾರಗಳಾಗಿ ಕಾರ್ಯನಿರ್ವಹಿಸುವ ವಾತಾವರಣ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಗ್ರಾಮ ಸ್ವರಾಜ್ಯ ಕರ್ನಾಟಕ ಅಭಿಯಾನವನ್ನು ಪರಿಣಾಮಕಾರಿಯಾಗಿ ರಾಜ್ಯಾದ್ಯಂತ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸಮಿತಿಯನ್ನು ರಚಿಸಿ ಜಿಲ್ಲಾ ಸಮಿತಿಯ ಅಧ್ಯಕ್ಷರನ್ನಾಗಿ ಹರೀಶ್ ಉಬರಡ್ಕ ಅವರನ್ನು ನೇಮಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.