Published
2 years agoon
By
Akkare News
ಬಂಟ್ವಾಳ:ಇಲ್ಲಿನ ಟಿಪ್ಪುನಗರ ಎಂಬಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಬೇಧೀಸಿ, ಜಾನುವಾರು ಸಹಿತ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಬಂಟ್ವಾಳ ನಗರ ಠಾಣಾಧಿಕಾರಿ ರಾಮಕೃಷ್ಣ ನೇತೃತ್ವದ ಪೊಲೀಸರ ತಂಡ ಈ ಕಾರ್ಯಾಚರಣೆ ನಡೆಸಿದ್ದು, ದನಗಳನ್ನು ಸಾಗಾಟ ಮಾಡುತ್ತಿದ್ದ KA-19-MF-4460 ನೋಂದಣಿ ಸಂಖ್ಯೆಯ ಒಮ್ಮಿಕಾರನ್ನು ಪೊಲೀಸರು ತಡೆದಾಗ, ಕಾರು ಚಾಲಕ ಹಾಗೂ ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಅವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಗಳು ಒಮ್ಮಿ ಕಾರು ಚಾಲಕ, ಪುದು ಗ್ರಾಮದ ಮಾರಿಪಳ್ಳ ನಿವಾಸಿ ಜಾಬಿರ್ (24) ಹಾಗೂ ಲೊರೆಟ್ರೊಪದವು ಸಮೀಪದ ಟಿಪ್ಪು ನಗರ ನಿವಾಸಿ ಅಬ್ದುಲ್ ನಾಸೀರ್ (32).

ಪೊಲೀಸರು ವಾಹನವನ್ನು ಪರಿಶೀಲಿಸಿದಾಗ ವಾಹನದಲ್ಲಿ 5 ಜಾನುವಾರುಗಳು ಕಂಡುಬಂದಿದ್ದು, ಜಾನುವಾರುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಒಮ್ಮಿ ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಪ್ರಕರಣದ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಮತ್ತು 34 ಐಪಿಸಿ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.