Published
1 year agoon
By
Akkare Newsಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಸದ್ಯ, ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಯಲ್ಲಿ ಬಿಜೆಪಿಯ ಹೈಕಮಾಂಡ್ ಅಚ್ಚರಿಯ ತೀರ್ಮಾನ ಕೈಗೊಂಡಿದೆ.
ಉಜ್ಜಯಿನಿ ದಕ್ಷಿಣದ ಬಿಜೆಪಿ ಶಾಸಕ ಮೋಹನ್ ಯಾದವ್ ಅವರು ಆರೆಸ್ಸೆಸ್ ಹಿನ್ನೆಲೆಯವರಾಗಿದ್ದು, ಕಳೆದ 30 ವರ್ಷಗಳಿಂದ ಬಿಜೆಪಿ ಮತ್ತು ಆರೆಸ್ಸೆಸ್ ನೊಂದಿಗೆ ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ. ಮೋಹನ್ ಯಾದವ್ ಅವರು ಹಿಂದುತ್ವದ ವಿಚಾರದಲ್ಲಿ ಕಟುವಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಿನ್ನೆಲೆ ಬಿಜೆಪಿ ಹೈಕಮಾಂಡ್ ಅವರ ಹೆಸರನ್ನು ಸಿಎಂ ಸ್ಥಾನಕ್ಕೆ ಫೈನಲ್ ಮಾಡಿದೆ ಎಂದು ತಿಳಿದು ಬಂದಿದೆ.
ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರ ಹೆಸರನ್ನು ಬಿಜೆಪಿ ಪ್ರಕಟ ಮಾಡುತ್ತಿದ್ದ ಹಾಗೇ ಸ್ವತಃ ಬಿಜೆಪಿ ನಾಯಕರಿಗು ಶಾಕ್ ನೀಡಿದೆ. ಮುಖ್ಯಮಂತ್ರಿಯಾಗಿ ಆಯ್ಕೆಯಾದ ಮೋಹನ್ ಯಾದವ್ ಅವರಿಗು ಕೂಡ ಅಚ್ಚರಿ ಮೂಡಿಸಿದೆ. ಹೀಗಾಗಿ ಮೋಹನ್ ಯಾದವ್ ಮತ್ತು ಇತರ ಬಿಜೆಪಿ ನಾಯಕರೊಳಗೊಂಡ ಹಾಗೆ ಎಲ್ಲರಿಗೂ ಬಿಜೆಪಿ ಹೈಕಮಾಂಡ್‌ನ ನಿರ್ಧಾರ ಶಾಕ್ ತರಿಸಿದೆ. ಮೋಹನ್ ಯಾದವ್ ಒಬಿಸಿ ನಾಯಕರಾಗಿದ್ದು, ಉಜ್ಜಯಿನಿ ದಕ್ಷಿಣದಿಂದ ಮೂರು ಬಾರಿ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. ಅಷ್ಟೇ ಅಲ್ಲದೆ, ಈ ಹಿಂದೆ ಮಧ್ಯಪ್ರದೇಶದ ಉನ್ನತ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.