ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಅಖಾಡಕ್ಕೆ ಧುಮುಕಿದ ಪುತ್ತಿಲ ಪರಿವಾರದಿಂದ ನಾಮಪತ್ರ ಸಲ್ಲಿಕೆ ; ನೂರಕ್ಕೆ ನೂರು ಗೆಲ್ಲುವ ವಿಶ್ವಾಸ.

Published

on

ಪುತ್ತೂರು : ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಡಿ.8 ರಂದು ಅಧಿಸೂಚನೆ ಹೊರಡಿಸಿದ್ದು, ಇಂದು ಪುತ್ತಿಲ ಪರಿವಾರದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ಪುತ್ತಿಲ ಪರಿವಾರದಿಂದ ವಾರ್ಡ್ 11 ರ ಅಭ್ಯರ್ಥಿಯಾಗಿ ಹಂದ್ರಟ್ಟ ನಿವಾಸಿ ಆನಂದ ಎಂಬವರ ಪುತ್ರ ಚಿಂತನ್ ಪಿ. ರನ್ನು ಆಯ್ಕೆ ಮಾಡಲಾಗಿ ಅದೇ ರೀತಿ ನಗರಸಭೆಯ ವಾರ್ಡ್ 1 ರ ಅಭ್ಯರ್ಥಿಯಾಗಿ ಶೇವಿರೆ ನಿವಾಸಿ ಕೃಷ್ಣ ರಾವ್ ಎಂಬವರ ಪತ್ನಿ ಅನ್ನಪೂರ್ಣ ಎಸ್.ಕೆ.ಯವರನ್ನು ಆದ ಮಾಡಲಾಗಿದೆ.

ಈಗಾಗಲೇ ಗ್ರಾಮ ಪಂಚಾಯತ್ ಉಪಚುನಾವಣೆ, ಸಹಕಾರ ಸಂಘಗಳ ಚುನಾವಣೆಯಲ್ಲಿ ಪುತ್ತಿಲ ಪರಿವಾರದ ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದು, ನಗರಸಭೆ ಉಪಚುನಾವಣೆಯ ಅಖಾಡಕ್ಕೆ ಕೂಡ ಪುತ್ತಿಲ ಪರಿವಾರ ಎಂಟ್ರಿ ನೀಡಿದೆ.ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾ ರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಡಿ.8 ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಗೊಳಿಸಲಿದ್ದು, ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ.ಡಿ.27 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರುಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿ ನಗರ ಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್ ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8 ರಿಂದ 30 ರ ತನಕ ಜಾರಿಯಲ್ಲಿರಲಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement