ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕಾನೂನು

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಿಎಂ .ಡಿಸಿಎಂ. ನಿಂದನೆ ಪ್ರಕರಣ. ಭಾ.ಜ.ಪ. ಕಾರ್ಯಕರ್ತನ ಬಂಧನ

Published

on

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. ಮುತ್ತೂರು ಗ್ರಾಮದ ಬೊಳಿಯ ನಿವಾಸಿ ಸಂತೋಷ್ ಪೂಜಾರಿ ಬಂಧಿತ ಆರೋಪಿ.

ಡಿ. 11 ರಂದು ಬಿಜೆಪಿ ಕಾರ್ಯಕರ್ತ ಎನ್ನಲಾದ ಮುತ್ತೂರು ಗ್ರಾಮದ ಬೊಳಿಯ ನಿವಾಸಿ ಸಂತೋಷ್ ಪೂಜಾರಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶ್ರೀ ನಾರಾಯಣ ಗುರು ಯುವ ವೇದಿಕೆ ಎಂಬ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ವಾಯ್ಸ್ ಬಿಟ್ಟಿದ್ದು, ನಂತರ ಆ ವಾಯ್ಸ್ ಕ್ಲಿಪ್ ಗಳು ಇತರ ಗ್ರೂಪ್ ಗಳಲ್ಲೂ ವೈರಲ್ ಆಗಿತ್ತು ಎನ್ನಲಾಗಿದೆ. ಈ ಬಗ್ಗೆ ಮುತ್ತೂರು ವಲಯ ಕಾಂಗ್ರೆಸ್ ಅಧ್ಯಕ್ಷ ಹರಿಯಪ್ಪ ಎಂಬವರು ಬಜ್ಜೆ ಠಾಣೆಗೆ ದೂರು ನೀಡಿದ್ದರು.



ದೂರಿನಂತೆ ದಿನಾಂಕ 14-12-2023 ರಂದು ಬಜೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಸಂತೋಷ್ ಬೋಳಿಯ ಎಂಬಾತನನ್ನು ವಶಕ್ಕೆ ತೆಗೆದುಕೊಂಡು ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement