ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಸರ್ವ ಧರ್ಮದ ಪ್ರಾರ್ಥನೆಯೊಂದಿಗೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿಗಳು. ಪಕ್ಷದ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಬಾಗಿ

Published

on

ಪುತ್ತೂರು : ನಗರಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ 27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಕಾಂಗ್ರೆಸ್ ಪಕ್ಷದಿಂದ ಇಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

ದೇವಸ್ಥಾನ, ಚರ್ಚ್ ಹಾಗೂ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ನಾಮಪತ್ರ ಸಲ್ಲಿಸಲಾಯಿತು.ವಾರ್ಡ್ ಹನ್ನೊಂದರ ಅಭ್ಯರ್ಥಿ ದಾಮೋದರ ಬಂಡಾರ್ಕರ್ ವಾರ್ಡ್ ಒಂದರ ಅಭ್ಯರ್ಥಿ ದಿನೇಶ್ ನಾಮಪತ್ರ ಸಲ್ಲಿಸಿದರು.ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.



ಕಾಂಗ್ರೆಸ್‌ ನಿಂದ ವಾರ್ಡ್ 1ರ ಅಭ್ಯರ್ಥಿಯಾಗಿ ದಿನೇಶ್ ಶೇವಿರೆ ಹಾಗೂ ವಾರ್ಡ್ 11ರ ಅಭ್ಯರ್ಥಿಯಾಗಿ ದಾಮೋದರ ಭಂಡಾರ್ಕರ್ ರವರು ನಾಮಪತ್ರ ಸಲ್ಲಿಸಿದರು.
ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾ ರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಡಿ.8 ರಂದು ಜಿಲ್ಲಾಧಿಕಾರಿಗಳು ಆಡಿನೂಚನೆ ಪ್ರಕಟಗೊಳಿಸಲಿದ್ದು ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ 16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ.


ಡಿ.27 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರುಮತದಾನ ನಡೆದು ಡಿ.30 ರಂದು ಬೆಳಿಗ್ಗೆ ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement