ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈPublished
2 years agoon
By
Akkare News
ಬೆಂಗಳೂರು: ರಾಜ್ಯದ ಪ್ರಮುಖ ಸಾರಿಗೆ ಸಂಸ್ಥೆಯಾದ ಕೆಎಸ್ಆರ್ಟಿಸಿ ಇದೇ ಮೊದಲ ಬಾರಿಗೆ ಲಾಜಿಸ್ಟಿಕ್ಸ್ ಸೇವೆಯನ್ನು ಡಿಸೆಂಬರ್ 23 ರಿಂದ ಪ್ರಾರಂಭಿಸಲಿದೆ. ಈ ಮೂಲಕ ನಾಡಿನ ಪ್ರಮುಖ ನಗರಗಳಿಗೆ ಕಾರ್ಗೋ ಸೇವೆ ಲಭ್ಯವಾಗಲಿದೆ.ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಕೆಎಸ್ಆರ್ಟಿಸಿಗೆ ನೂತನವಾಗಿ ಸೇರ್ಪಡೆಗೊಳಿಸುತ್ತಿರುವ ನಮ್ಮ ಕಾರ್ಗೋ ಪಾರ್ಸೆಲ್ ಮತ್ತು ಕೊರಿಯರ್ ಟ್ರಕ್ ಗಳನ್ನು ಶನಿವಾರ ಬೆಂಗಳೂರಿನ ಕೆ ಎಸ್ ಆರ್ ಟಿ ಸಿ ಕೇಂದ್ರ ಕಚೇರಿಯಲ್ಲಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ನುಕುಮಾರ್ ಮತ್ತು ನಿಗಮದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವರು ಡಿಸೆಂಬರ್ 23ಕ್ಕೆ ಒಟ್ಟು 20 ಟ್ರಕ್ ಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ಮಾಹಿತಿ ನೀಡಿದರು.ಕೆಎಸ್ಆರ್ಟಿಸಿ ಈಗಾಗಲೇ ಬಸ್ಗಳಲ್ಲಿ ಕಾರ್ಗೋ ಸೇವೆಯನ್ನು ಆರಂಭಿಸಿದೆ. ಆದರೆ ಡೋರ್ ಸ್ಟೆಪ್ ಸೇವೆಯನ್ನು ನೀಡುವ ಉದ್ದೇಶದಿಂದ ಈ ಲಾರಿಗಳನ್ನು ಖರೀಸಲಾಗಿದೆ. ಉತ್ಪಾದನಾ ಘಟಕಗಳಿಂದ ಸರಕುಗಳನ್ನು ಸಾಗಿಸುವವರಿಗೆ ಈ ಸೇವೆ ಅನುಕೂಲವಾಗಿದೆ. ಸದ್ಯ ಬೆಂಗಳೂರು ಮಂಗಳೂರು, ಹುಬ್ಬಳ್ಳಿ ಸೇರಿದಂತೆ ಪ್ರಮುಖ ನಗರಗಳ ನಡುವೆ ಈ ಲಾರಿಗಳು ಸಂಚಾರ ನಡೆಸಲಿದೆ. ಮುಂದಿನ ದಿನಗಳಲ್ಲಿ ಲಾರಿ ಸಂಖ್ಯೆ ಹೆಚ್ಚಿಸಿ ಎಲ್ಲಾ ಊರುಗಳಿಗೂ ಸೇವೆ ನೀಡಲು ಚಿಂತನೆ ನಡೆಸಲಾಗಿದೆ ಎಂದು ವರದಿಯಾಗಿದೆ.


