ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಉಡುಪಿ

ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ಆತ್ಮಹತ್ಯೆ ಪ್ರಕರಣ: ಸಾಕು ಪುತ್ರಿ ಸಹಿತ ಐವರು ಪೊಲೀಸರ ವಶ

Published

on

ಉಡುಪಿ: ಸಾಕು ಮಗಳು ಮನೆಯಿಂದ ನಾಪತ್ತೆಯಾದ ಕಾರಣ ಮನನೊಂದು ನೇಣಿಗೆ ಶರಣಾದ ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ ದಂಪತಿಯ ಸಾವಿಗೆ ಕಾರಣರಾದ ಸಾಕು ಪುತ್ರಿಯನ್ನು ಕಾಪು ಪೊಲೀಸರು ಕುಂಬಳೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.ಅಪ್ರಾಪ್ತ ವಯಸ್ಸಿನ ಸಾಕು ಮಗಳು, ಆಕೆಯ ಪ್ರಿಯಕರ ಮತ್ತು ಆತನಿಗೆ ನೆರವಾದ ಇತರ ಮೂವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಮುಂದುವರಿಸಿದ್ದಾರೆ.



ಬಾಲಕಿಯ ಪ್ರಿಯಕರ ಶಿರ್ವ ನಿವಾಸಿ ಗಿರೀಶ್, ಆತನಿಗೆ ನೆರವಾದ ರೂಪೇಶ್, ಅಜೀಜ್ ಮತ್ತು ಜಯಂತ್ ಪೊಲೀಸ್ ಬಂಧಿತರು. ಬಂಧಿತರನ್ನು ತೀವ್ರ ವಿಚಾರಣೆಗೊಳಪಡಿಸಿರುವ ಪೊಲೀಸರು ಎರಡು ಸ್ಕೂಟಿಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ ಗಿರೀಶ್ ವಿರುದ್ಧ ಅಪಹರಣ, ಅತ್ಯಾಚಾರ ಮತ್ತು ಪೋಕೋ ಆಕ್ಟ್ ನಂತೆ ಪ್ರಕಾರ ದಾಖಲಾಗಿದ್ದು ಉಳಿದ ಮೂವರ ವಿರುದ್ದ ಆರೋಪಿಗೆ ಸಹಕರಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಕಾಪು ಪೊಲೀಸರು ತಿಳಿಸಿದ್ದಾರೆ. ಉಡುಪಿ ಎಸ್ಪಿ ಡಾ. ಅರುಣ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಜಿ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ, ಕಾಪು ಎನ್ನೈ ಅಬ್ದುಲ್ ಖಾದರ್, ಕ್ರೈಂ ಎಸ್ಟ್ ಪುರುಷೋತ್ತಮ್ ನೇತೃತ್ವದಲ್ಲಿ ಸಿಬಂದಿಗಳು ಕಾರ್ಯಾಚರಣೆ ನಡೆಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version