ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
1 year agoon
By
Akkare Newsಬೆಂಗಳೂರು: ವಾಹನ ಸವಾರರು ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಸಂಚಾರಿ ಪೊಲೀಸರು ಯಾವುದೇ ಸಂದರ್ಭದಲ್ಲಿ ವಾಹನ ಸವಾರರಿಂದ ದಂಡದ ಮೊತ್ತ ಸಂಗ್ರಹಿಸುವ ಅವಕಾಶವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.
ಹೆಲ್ಲೆಟ್ ಧರಿಸದೇ ಇರುವುದಕ್ಕೆ ದಂಡಪಾವತಿಸಲು ನಿರಾಕರಿಸಿದ ಮತ್ತು ಬಲಪ್ರಯೋಗ ನಡೆಸಿ ಸರ್ಕಾರಿ ಅಧಿಕಾರಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದ ಆರೋಪಸಂಬಂಧ ತಮ್ಮ ವಿರುದ್ಧದ ದೋಷಾರೋಪ ಪಟ್ಟಿ ರದ್ದು ಮಾಡುವಂತೆ ಕೋರಿ ಕೆ.ಆರ್.ವೇಟೆ ಪಟ್ಟಣದ ಸುಭಾಷ್ ನಗರದ ನಿವಾಸಿ ಕೆ.ಟಿ.ನಟರಾಜು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಹೇಮಂತ್ ಚೆಂದನ್ ಗೌಡರ್ ಅವರ ಪೀಠ ಈ ಆದೇಶ ಮಾಡಿದೆ.
ಸಂಚಾರ ನಿಯಮ ಉಲ್ಲಂ ಘಿಸುವ ಪ್ರಕರಣಗಳಲ್ಲಿ ಪೊಲೀಸರು ತಪಾಸಣೆ ಮಾಡುವುದನ್ನು ವಿಡಿಯೋ ಚಿತ್ರೀಕರಣ ಮಾಡಬೇಕಾಗುತ್ತದೆ ಹಾಗೂ ಸಂಚಾರ ಪೊಲೀ ಸರು ಯಾವುದೇ ಸಂದರ್ಭದಲ್ಲಿ ಆರೋಪಿ ಯಿಂದ ದಂಡದ ಮೊತ್ತ ಸಂಗ್ರಹಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಪುನರುಚ್ಚರಿಸಿದೆ.
ಹೈಕೋರ್ಟ್ ನೀಡಿದ್ದ ತೀರ್ಪು ಉಲ್ಲೇಖಿಸಿದ ನ್ಯಾಯಪೀಠ, ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರ ಕಚೇರಿ ಹೊರಡಿಸಿರುವ ಸುತ್ತೋಲೆ ಪ್ರಕಾರ, ದಂಡದ ಮೊತ್ತವನ್ನು ನಿರ್ಧರಿಸಲು ನ್ಯಾಯಾಲಯಕ್ಕೆ ಮಾತ್ರ ಅಧಿಕಾ ರವಿದೆ. ಯಾವುದೇ ಪರಿಸ್ಥಿತಿಯಲ್ಲೂ ಸಂಚಾರ ಪೊಲೀಸರು ಆರೋಪಿಯಿಂದ ದಂಡ ಸಂಗ್ರಹಿ ಸಲು ಸಾಧ್ಯವಿಲ್ಲ. ವಾಹನ ತಪಾಸಣಾ ಚಟುವ ಟಿಕೆಯನ್ನು ವಿಡಿಯೋ ಚಿತ್ರೀಕರಣ ಮಾಡಬೇಕು. ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆಗೆ ಮುಂದಾದರೆ ವ್ಯಕ್ತಿಯನ್ನು ತಡೆಯಬೇಕು. ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಠಾಣೆಯ ಪೊಲೀಸರನ್ನು ಕರೆಸಿ, ಆರೋಪಿಯನ್ನು ವಶಕ್ಕೆ ನೀಡಬೇಕು. ಇಲ್ಲದಿದ್ದರೆ ಹಲ್ಲೆ ಹಾಗೂ ಬಲಪ್ರಯೋಗ ನಡೆಸಿ ಸರ್ಕಾರಿ ಅಧಿಕಾರಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಪ್ರಕರಣ ವನ್ನು ಸಾಬೀತುಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.