ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಹೊಸ ವರ್ಷ ಆಚರಣೆ. ಸರಕಾರದ ಮಾರ್ಗ ಸೂಚಿ ಪ್ರಕಟ ಸಾರ್ವಜನಿಕರೇ ಇಲ್ಲಿದೆ ಸಂಪೂರ್ಣ ಮಾಹಿತಿ !!!

Published

on

ಇನ್ನೇನು ಹೊಸವರ್ಷವನ್ನು ಸ್ವಾಗತಿಸಲು ಎಲ್ಲರೂ ಸಜ್ಜಾಗಿದ್ದಾರೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ BBMP ಮತ್ತು ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪೊಲೀಸರು ಸಭೆ ನಡೆಸಿ ಈ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ.

ಹೊಸ ವರ್ಷಕ್ಕೆ ಮಾರ್ಗಸೂಚಿ ಈ ರೀತಿ ಇದೆ:
ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿವಾಹನ ಸಂಚಾರ ಬಂದ್ ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಯಬೇಕು. ಬಾರ್ ಮತ್ತು ಪಬ್‌ಗಳು ರಾತ್ರಿ 1 ಗಂಟೆ ಬಳಿಕ ಬಂದ್ ಹೊಸ ವರ್ಷಾಚರಣೆಗೆ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಅನುಮತಿ ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ ವಿವಿಧ ಭಾಗಗಳಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಅನುಮತಿ ಕಡ್ಡಾಯ ಸಂಭ್ರಮಾಚರಣೆಗೆ ಬರುವವರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ರಾತ್ರಿ 10 ಗಂಟೆ ಬಳಿಕ ಪ್ರಮುಖ ಮೇಲ್ಸ್ತುವೆಗಳು ಬಂದ್ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಸಿಸಿ ಕ್ಯಾಮೆರಾ ಅಳವಡಿಕೆ.



ರಾತ್ರಿ ಇಡೀ ವಿದ್ಯುತ್ ಸಂಪರ್ಕ ಸ್ಥಗಿತವಾಗದಂತೆ ಕ್ರಮ ವಹಿಸಲು ಬೆಸ್ಕಾಂಗೆ ಸೂಚಿಸಲಾಗಿದೆ. ಬಾರ್, ರೆಸ್ಟೋರೆಂಟ್‌ಗಳಿಗೆ ಕಠಿಣ ಮಾರ್ಗಸೂಚಿ ರೂಪಿಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ವರ್ಷಾಂತ್ಯಕ್ಕೆ ಇರಲಿದೆ. ಹೆಚ್ಚು ಜನಸಂದಣಿ ಇರುವ ಸ್ಥಳಗಳು, ವಾಣಿಜ್ಯ ಪ್ರದೇಶಗಳು, ಪ್ರಮುಖ ರಸ್ತೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ.

ಡಿ.31 ರಂದು ಒಂದು ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು. ರಾತ್ರಿ 10 ಗಂಟೆಯ ನಂತರ ಎಲ್ಲಾ ಮೇಲ್ಸ್ತುವೆಗಳಲ್ಲಿ ವಾಹನ ಸಂಚಾರ ನಿರ್ಬಂಧ, ಎಂ ಜಿ ರಸ್ತೆ ಬ್ರಿಗೇಡ್ ರಸ್ತೆಯಲ್ಲಿ 200 ಕ್ಕೂ ಹೆಚ್ಚು ಸಿಸಿ ಕ್ಯಾಮೆರಾ ಅಳವಡಿಕೆ. ರಾತ್ರಿ ಎಂಟು ಗಂಟೆಯ ನಂತರ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಸಂಚಾರ ಬಂದ್ ಎಂದು ತಿಳಿಸಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಿಎಂಟಿಸಿ ಬಸ್‌ಗಳ ಸಂಚಾರ ಇರಲಿದೆ. ಮೆಟ್ರೋ ರೈಲು ಸಂಚಾರ ರಾತ್ರಿ ಒಂದು ಗಂಟೆಯವರೆಗೆ ಇರಲಿದೆ. ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಮಹಳಾ ಪೊಲೀಸ್ ಸಿಬ್ಬಂದಿ ನಿಯೋಜನೆ, ಬಾರ್, ಪಬ್ ಒಂದು ಗಂಟೆಗೆ ಮುಚ್ಚುವಂತೆ ಸೂಚನೆ ನೀಡಲಾಗಿದೆ ಎಂಬ ಮಾಹಿತಿ ನೀಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version