ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕಾನೂನು

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ .ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ. ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮನವಿ

Published

on

ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಂಸತ್ ಭವನದ ಪ್ರಧಾನಿ ಕಚೇರಿಗೆ ತೆರಳಿದ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಕೃಷ್ಣಭೈರೇಗಾಡ ಅವರು ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ ಕೃಷಿ ನಷ್ಟ, ಬರಪರಿಸ್ಥಿತಿ ನಿರ್ವಹಣೆಗೆ ಬೇಕಾಗಿರುವ ನೆರವಿನ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಪ್ರಧಾನಿ ಮೋದಿ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ನಾನು ಮತ್ತು ಕಂದಾಯ ಸಚಿವ ಕೃಷ್ಣಭೈರೇಗೌಡ ಇಬ್ಬರು ಪ್ರಧಾನಿಯವರನ್ನು ಭೇಟಿ ಮಾಡಿದ್ದೇವೆ. ಈ ವೇಳೆ ನಾಲೈದು ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ. ಪ್ರಮುಖವಾಗಿ ಬರಗಾಲ, ನೂರು ದಿನಗಳ ಕೂಲಿಯನ್ನ 150 ದಿನಕ್ಕೆ ಏರಿಕೆಗೆ ಮನವಿ ಮಾಡಲಾಗಿದೆ. ಮಹದಾಯಿ, ಭದ್ರ ಮೇಲ್ದಂಡೆ ಮತ್ತು ಮೇಕೆದಾಟು ವಿಚಾರವನ್ನು ಚರ್ಚೆ ನಡೆಸಿದ್ದೇವೆ ಎಂದಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿದ್ದಾರೆ. ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್ ಸಬ್ಸಿಡಿ, 12,7577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದೆ. ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್.ಡಿ.ಆರ್.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ. ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement