ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಆರೋಗ್ಯ

ಜೆ.ಎನ್. 1.ಪ್ರಕರಣ. ಕರ್ನಾಟಕದಲ್ಲಿ ಒಂದು ಸಾವು . ದೃಢಪಡಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್.

Published

on

ಬೆಂಗಳೂರು: ಕೊರೊನಾ ವೈರಸ್ ನ ಜೆಎನ್ 1 ಒಟ್ಟು 20 ಸೋಂಕು ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದ್ದು ಕರ್ನಾಟಕದಲ್ಲಿ ಕೋವಿಡ್ ಸೋಂಕಿನಿಂದಾಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು. ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಮಾಂಡವೀಯ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯಲ್ಲಿ ಗುಂಡೂರಾವ್ ಭಾಗವಹಿಸಿದ್ದಾರೆ.

ಸಭೆಯ ಬಳಿಕ ವಿಕಾಸ ಸೌಧದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ರಾಜ್ಯದಲ್ಲಿ ನಿನ್ನೆ ಕೊರೊನಾ ವೈರಸ್ ಸೋಂಕಿಗೆ 64 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪಡೆದಿದೆ.ಜೆಎನ್ 1 ವೈರಸ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡಿದೆ. ದೇಶದಲ್ಲಿ ಒಟ್ಟು 20 ಜೆಎನ್1 ಪ್ರಕರಣಗಳು ಪತ್ತೆಯಾಗಿದ್ದು ಅದರಲ್ಲಿ ಗೋವಾದಲ್ಲಿ 18, ಮಹಾರಾಷ್ಟ್ರದಲ್ಲಿ 1, ಕೇರಳದಲ್ಲಿ 1 ಕೇಸ್ ಪತ್ತೆಯಾಗಿದೆ ಎಂದು ಗುಂಡೂರಾವ್ ಮಾಹಿತಿ ನೀಡಿದರು.


Continue Reading
Click to comment

Leave a Reply

Your email address will not be published. Required fields are marked *

Advertisement