ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಆರೋಗ್ಯ

ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರದಿಂದ ಯಾವುದೇ ನಿರ್ಬಂಧಗಳಿಲ್ಲ ಮುಖ್ಯಮಂತ್ರಿ. ಸಿದ್ದರಾಮಯ್ಯ

Published

on

ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆ, ಹೊಸ ಉಪತಳಿ ಪತ್ತೆ ವರದಿಯಾಗಿವೆ. ಆದರೂ ಕೋವಿಡ್ ಬಗ್ಗೆ ಆತಂಕ ಅನಗತ್ಯ. ಕ್ರಿಸ್ನಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ. ಜನ ಗುಂಪು ಸೇರುವೆಡೆ ಮಾಸ್ಕ್ ಧರಿಸಲು ಸರ್ಕಾರ ಸಲಹೆ ನೀಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಉನ್ನತಾಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ಗುರುವಾರ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ರಿಸ್ನಸ್ ಹಾಗೂ ಹೊಸ ವರ್ಷಕ್ಕೆ ಪ್ರತ್ಯೇಕವಾಗಿ ಹೊರಡಿಸುವುದಿಲ್ಲ, ಅದರ ಅಗತ್ಯವೂ ಇಲ್ಲ. ಜನರು ಗಾಬರಿಯಾಗಬಾರದು ಎಂದು ಅಭಯ ನೀಡಿದರು‌.

ಉಪಸಮಿತಿ ಮೇಲ್ವಿಚಾರಣೆ
ಕೋವಿಡ್ ನಿರ್ವಹಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ., ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆ ಮೇಲ್ವಿಚಾರಣೆ ಮಾಡಲು ಸಂಪುಟ ಉಪ ಸಮಿತಿ ರಚಿಸಲಾಗಿದೆ, ಔಷಧ ಖರೀದಿ, ಮಾಸ್ಕ್ ಕಡ್ಡಾಯ ಸೇರಿದಂತೆ ಎಲ್ಲ ವಿಷಯವನ್ನೂ ಸಂಪುಟ ಉಪ ಸಮಿತಿ ನಿರ್ಧಾರ ಮಾಡಲಿದೆ, ಇಂದಿನ ಸಚಿವ ಸಂಪುಟ ಸಭೆಯಲ್ಲೇ ಸಂಪುಟ ಉಪ ಸಮಿತಿ ರಚಿಸಲಾಗುತ್ತದೆ ಎಂದುಸಿಎಂ ಸಿದ್ದರಾಮಯ್ಯ ತಿಳಿಸಿದರು.


Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version