ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಮತ್ತು ಗಿಗ್ ಕಾರ್ಮಿಕರ ವಿಮಾ ಯೋಜನೆಯ ನೋಂದವಣೆ ಕಾರ್ಯಕ್ರಮ

Published

on

ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಮತ್ತು ಗಿಗ್ ಕಾರ್ಮಿಕರ ವಿಮಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ದಿನಾಂಕ:22-12-2023 ರಂದು ಸಹಾಯಕ ಕಾರ್ಮಿಕ ಆಯುಕ್ತರ ಕಛೇರಿ, ಮಂಗಳೂರು ವಿಭಾಗ, ಮಂಗಳೂರು ಇಲ್ಲಿ ವಿಜಯವಾಣಿ ಪತ್ರಿಕೆಯ ಸಹಯೋಗದೊಂದಿಗೆ ಆಯೋಜಿಸಲಾಯಿತು. ಯೋಜನೆಯ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡುತ್ತಾ, ದಿನಪತ್ರಿಕೆ ವಿತರಣೆ ಮಾಡುವ ಕಾರ್ಮಿಕರು ಪ್ರತಿನಿತ್ಯ ಸಾರ್ವಜನಿಕರ ಮನೆ ಬಾಗಿಲಿಗೆ ಪ್ರತಿಕೆಗಳನ್ನು ವಿತರಿಸುತ್ತಿದ್ದು, ಅಪಘಾತಕ್ಕೊಳಗಾಗುವ ಸಾಧ್ಯತೆ ಇರುವುದರಿಂದ, ಈ ಯೋಜನೆಯ ಸೌಲಭ್ಯ ಪಡೆಯುವುದು ಅತ್ಯಗತ್ಯ ಹಾಗೆಯೇ ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ದೇಶದಲ್ಲಿಯೇ ಮೊದಲ ಬಾರಿಗೆ ವಿಮಾ ಯೋಜನೆ ಜಾರಿಯಾಗಿರುತ್ತದೆ. ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವುದು. ಈ ವಿಮಾ ಸೌಲಭ್ಯವು ಅಪಘಾತವಾದಲ್ಲಿ ಹಾಗೂ ಅಪಘಾತದಿಂದ ಮರಣ ಹೊಂದಿದಲ್ಲಿ ನೋಂದಾಯಿತರಿಗೆ ಅನ್ವಯವಾಗುತ್ತದೆ ಎಂದು ಹೇಳಿ ಸಹಾಯಕ ಕಾರ್ಮಿಕ ಆಯುಕ್ತರು, ಮಂಗಳೂರು ಇವರು ವಿದ್ಯುಕ್ತವಾಗಿ ಚಾಲನೆ ನೀಡಿದರು.



ಸದರಿ ಸಭೆಯಲ್ಲಿ ಉಪಸ್ಥಿತರಿದ್ದ ವಿಜಯವಾಣಿ ಪತ್ರಿಕೆಯ ಸಹಾಯಕ ಸುದ್ದಿ ಸಂಪಾದಕರಾದ ಶ್ರೀ ಬಾಲಮುರಳಿ ಕೃಷ್ಣ, ಇವರು ಮಾತನಾಡಿ ಈ ಯೋಜನೆಯು ಒಂದು ಉತ್ತಮ ಯೋಜನೆಯಾಗಿದ್ದು, ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುತ್ತದೆ ಎಂದು ಹೇಳಿದರು. ಉದಯವಾಣಿ ಪತ್ರಿಕೆಯ ಸಂಯೋಜಕರು, ಶ್ರೀ ಅರುಣ್ ಕುಮಾರ್ ಹಾಗೂ ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತರಾದ ಶ್ರೀ ಶಿವಕುಮಾರ ಬಿ.ಈ, ಕಾರ್ಮಿಕ ಅಧಿಕಾರಿಗಳಾದ ಕುಮಾರಿ ಕಾವೇರಿ. ಟಿ ಮತ್ತು ಶ್ರೀಮತಿ ವಿಲ್ಮ ಎಲಿಜಬೆತ್ ತಾವೋ ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು ಮತ್ತು ಸಿಬ್ಬಂದಿಗಳಾದ ಕುಮಾರಿ.ಭಾಗ್ಯಶ್ರೀ ಎಸ್.ವಿ ಮತ್ತು ಹರೀಶ್.ಓ ಹಾಗೂ ದಿನಪತ್ರಿಕೆ ವಿತರಕರು ಹಾಗೂ ಗಿಗ್ ಕಾರ್ಮಿಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

“ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ”
ಯೋಜನೆಯ ವಿಶೇಷತೆಗಳು:
ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ದೇಶದಲ್ಲಿಯೇ ಮೊದಲ ಬಾರಿಗೆ ಜಾರಿ.
. ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವುದು.
. ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ / ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯ.
. ಯೋಜನೆಯು ಸಂಪೂರ್ಣ ಉಚಿತ, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇಲ್ಲ.

ನೋಂದಣಿಗೆ ಅರ್ಹ ಕಾರ್ಮಿಕರು:-
ಸಿಗ್ರಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್‌ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪಿಫ್‌ಕಾರ್ಟ್, ಬಿಗ್‌ಬಾಸ್ಕೆಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಪೋ, ಬಿಗ್ ಬಾಸ್ಕೆಟ್, ಡಾಮಿನೋಜ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಕೊಂಡ ಎಲ್ಲಾ ಅಸಂಘಟಿತ ಗಿಗ್ ಕಾರ್ಮಿಕರು.

ದೊರಕುವ ಸೌಲಭ್ಯಗಳು:-
.ಅಪಘಾದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ2.00 ಲಕ್ಷ ಹಾಗೂ ಜೀವ ವಿಮೆ ರೂ 2.00 ಲಕ್ಷ ಸೇರಿ ಒಟ್ಟು ರೂ.4.00 ಲಕ್ಷಗಳು.
. ಅಪಘಾದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ.2.00 ಲಕ್ಷಗಳವರೆಗೆ
.ಆಸ್ಪತ್ರೆ ವೆಚ್ಚ ಮರುಪಾವತಿ ರೂ.1.00 ಲಕ್ಷಗಳವರೆಗೆ (ಅಪಘಾತ ಪ್ರಕರಣಗಳಿಗೆ ಮಾತ್ರ)
. ಜೀವ ವಿಮಾ ರೂ.2.00 ಲಕ್ಷಗಳು.

ಇಂದ:-
.18 ರಿಂದ 60 ವಯೋಮಾನದವರು.
.ಆದಾಯ ತೆರಿಗೆ ಪಾವತಿದಾರರಾಗಿರಬಾರದು.
.ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲಾನುಭವಿಯಾಗಿರಬಾರದು.
.ಕರ್ನಾಟಕದಲ್ಲಿ ಗಿಗ್ ವೃತ್ತಿ (ಡೆಲಿವರಿ ಕಾರ್ಯ) ನಿರ್ವಹಿಸುತ್ತಿರುವವರಿಗೆ ಮಾತ್ರ.

ಅವಶ್ಯಕ ದಾಖಲೆಗಳು:-
.ಆಧಾ‌ರ್ ಸಂಖ್ಯೆ
.ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ
. ಇ-ಶ್ರಮ್ ನೋಂದಣಿ ಸಂಖ್ಯೆ (ಇಲ್ಲವಾದಲ್ಲಿ www.eshram.gov.in ಅಲ್ಲಿ ನೋಂದಾಯಿಸಿ ಪಡೆದುಕೊಳ್ಳುವುದು).

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕಾರ್ಮಿಕ ಸಹಾಯವಾಣಿ 155214 (24×7), ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು/ ಕಾರ್ಮಿಕ ನಿರೀಕ್ಷಕರ ಕಛೇರಿಗಳು, ಕಾರ್ಮಿಕ ಇಲಾಖೆ. ಮಂಗಳೂರು

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version