ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈPublished
1 year agoon
By
Akkare Newsಪುತ್ತೂರು: ಗೃಹಲಕ್ಷ್ಮಿ ಯೋಜನೆಯಲ್ಲಿರುವ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಮುಂದಾಗಿದೆ. ಸಮಸ್ಯೆ ನಿವಾರಣೆಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕ್ಯಾಂಪ್ ಆಯೋಜಸಲು ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಕ್ಯಾಂಪ್ ಆಯೋಜನೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮೂಲಕ ಸುತ್ತೋಲೆ ಹೊರಡಿಸಲಾಗಿದೆ. ಪಿಡಿಓಗಳ ನೇತೃತ್ವದಲ್ಲಿ ಕ್ಯಾಂಪ್ ಆಯೋಜನೆ ಆಗಲಿದ್ದು, ಈ ಕ್ಯಾಂಪ್ ನಲ್ಲಿ ಫಲಾನುಭವಿಗಳಿಗೆ ಇರುವ ಸಮಸ್ಯೆ ಸರಿಪಡಿಸಲು ಸೂಚನೆ ನೀಡಲಾಗಿದೆ.ಪುತ್ತೂರು ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಡಿ. 27, 28, 29ರಂದು ಕ್ಯಾಂಪ್ ಆಯೋಜಿಸಲಾಗಿದ್ದು, ಇದರ ಸದುಪಯೋಗವನ್ನು ಪಡೆಯುವಂತೆ ಶಾಸಕ ಅಶೋಕ್ ಕುಮಾರ್ ರೈ ಮನವಿ ಮಾಡಿದ್ದಾರೆ.
ಈ ಮೂರು ದಿನಗಳಲ್ಲಿ ಬೆಳಗ್ಗೆ 9.00 ರಿಂದ ಸಂಜೆ 5.00 ಗಂಟೆಯವರೆಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಇರುವ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಖಾತೆಗೆ ಹಣ ಜಮೆ ಆಗದ ಫಲಾನುಭವಿಗಳು ಈ ಕ್ಯಾಂಪ್ ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಶಾಸಕರು ತಿಳಿಸಿದ್ದಾರೆ. ಕ್ಯಾಂಪ್ ಗೆ ರೇಶನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಆಧಾರ್ ನಲ್ಲಿ ನಮೂದಿಸಲಾದ ಮೊಬೈಲ್ ಸಂಖ್ಯೆ ಇರುವ ಮೊಬೈಲ್ ನೊಂದಿಗೆ ತೆರಳುವಂತೆ ಸೂಚಿಸಲಾಗಿದೆ.