ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
12 months agoon
By
Akkare Newsಪುತ್ತೂರು;ಹಿಂದುತ್ವದ ಹೆಸರಿನಲ್ಲಿ ವೋಟು ಕೇಳಿ ಅದೇ ಆಧಾರದಲ್ಲಿ ಅಧಿಕಾರಕ್ಕೆ ಬಂದವರು ಇದುವರೆಗೆ ಒಂದೇ ಒಂದು ದಐವ , ದೇವಸ್ಥಾನದ ದಾಖಲೆಗಳನ್ನು ಸರಿಮಾಡಲಿಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಆರೋಪಿಸಿದರು.ಅವರು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ತೆರಳುವ ರಸ್ತೆ ಮತ್ತು ಅಲ್ಲಿ ಆಗಬೇಕಾದ ಕಾಮಗಾರಿಗಳನ್ನು ಪರಿಶೀಲನೆ ಮಾಡಿ ಜೀರ್ಣೋದ್ದಾರ ಕೆಲಸವನ್ನು ವೀಕ್ಷಣೆ ಮಾಡಿದರು.
ಪುತ್ತೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಬಹುತೇಕ ದೈವ, ದೇವಸ್ಥಾನದ ಜಾಗದ ದಾಖಲೆಗಳು ಸರಿಯಿಲ್ಲ. ಯಾವುದೇ ದೇವಸ್ಥಾನಕ್ಕಾಗಲಿ, ದೈವಸ್ಥಾನಕ್ಕಗಿ ಅದರದೇ ಹೆಸರಿನಲ್ಲಿ ಆರ್ ಟಿ ಸಿ ಇಲ್ಲ ಇತರೆ ಯಾವುದೇ ದಾಖಲೆಗಳು ಇಲ್ಲ. ದಾಖಲೆಗಳಿಲ್ಲ ಕಾರಣಕ್ಕೆ ಅನುದಾನವನ್ನು ಪಡೆಯಲು ಕಷ್ಟವಾಗುತ್ತಿದೆ. ಯಾವುದೇ ದೇವಸ್ಥಾನ ಅಥವಾ ದೈವಸ್ಥಾನಕ್ಕೆಸರಕಾರದಿಂದ ಅನುದಾನ ನೀಡಬೇಕಾದರೆ ದಾಖಲೆಗಳು ಅತೀ ಅಗತ್ಯವಾಗಿದೆ, ದಾಖಲೆ ಇಲ್ಲದೆ ಹೇಗೆ ಅನುದಾನವನ್ನು ನೀಡುವುದು ಎಂಬುದೇ ಅತ್ಯಂತ ಬೇಸರದ ಸಂಗತಿಯಾಗಿದೆ.ಹಿಂದುತ್ವದ ಹೆಸರಿನಲ್ಲೇ ವೋಟು ಕೇಳಿದವರು ದೇವಸ್ಥಾನದ ದಾಖಲೆ ಪತ್ರಗಳನ್ನಾದರೂ ಸರಿ ಮಾಡಬಹುದಿತ್ತು ಎಂದು ಹೇಳಿದ ಶಾಸಕರು ಪ್ರತೀ ಚುನಾವಣೆಯ ಸಂದರ್ಬದಲ್ಲಿ ಮುಗ್ದ ಜನರನ್ನು ಧರ್ಮದ ಹೆಸರಿನಲ್ಲಿ ಕೆರಳಿಸಿ ಅಧಿಕಾರಕ್ಕೇರಿದ್ದು ಮಾತ್ರ ಅವರ ಸಾಧನೆಯಾಗಿದೆ ಎಂದು ಬಿಜೆಪಿ ಹೆಸರು ಹೇಳದೆ ಪರೋಕ್ಷವಾಗಿ ಟಾಂಗ್ ನೀಡಿದರು.
ಸರಕಾರದ ಜೊತೆ ಮಾತನಾಡುತ್ತೇನೆ
ಜಿಲ್ಲೆಯ ಪ್ರತೀ ದೈವ, ದೇವಸ್ಥಾನಗಳ ದಾಖಲೆಗಳನ್ನು ಸರಿಪಡಿಸಲು ಸರಕಾರದ ಜೊತೆ ಈಗಾಗಲೇ ಮಾತುಕತೆಯನ್ನು ನಡೆಸಿದ್ದೇನೆ. ಅಧಿವೇಶನದಲ್ಲೂ ಸರಕಾರದ ಗಮನಕ್ಕೆ ತಂದಿದ್ದೇನೆ. ದಾಖಲೆ ಇಲ್ಲದ ಪ್ರತೀ ದೈವ, ದೇವಸ್ಥಾನಗಳಿಗೆ ಆರ್ ಟಿ ಸಿ ನೀಡುವಂತೆ ಕೇಳಿಕೊಂಡಿದ್ದೇನೆ. ಇದು ಜನತೆಯ ಅಥವಾ ಭಕ್ತರ ಭಾವನೆಯ ಪ್ರಶ್ನೆಯಾಗಿದೆ ಎಂದು ಹೇಳಿದ ಶಾಸಕರು ಹಿಂದುತ್ವದ ಆಧಾರದಲ್ಲಿ ವೋಟು ಕೇಳಲು ಬರುವಾಗ ಜನತೆ ಈ ಬಗ್ಗೆ ಪ್ರಶ್ನೆ ಮಾಡಬೇಕು ಎಂದು ಹೇಳಿದರು.