ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಆರೋಗ್ಯ

ರಾಜ್ಯದಲ್ಲಿ ಮತ್ತಿಬ್ಬರು ಕೋರೋನಾ​ ಸೋಂಕಿನಿಂದ ಮೃತ. ಇಂದು ಒಂದೇ ದಿನ 74 ಪಾಸಿಟಿವ್ ಪ್ರಕರಣ ವರದಿ

Published

on

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತಷ್ಟು ಉಲ್ಭಣಗೊಂಡಿದೆ. ಇಂದು ರಾಜ್ಯದಲ್ಲಿ ಮತ್ತಿಬ್ಬರು ಕೊವಿಡ್​ ಸೋಂಕಿನಿಂದ ಮೃತಪಟ್ಟಿದ್ದಾರೆ.ಇಂದು ಒಂದೇ ದಿನ 74 ಪಾಸಿಟಿವ್ ಪ್ರಕರಣ ವರದಿಯಾಗಿದೆ. ಸದ್ಯ 464 ಸಕ್ರಿಯ ಪ್ರಕರಣಗಳಿದ್ದು, ಸೋಂಕಿನ ಪಾಸಿಟಿವಿಟಿ ದರ ಶೇ.1.15ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 6403 ಟೆಸ್ಟ್‌(680 RTCPR ಹಾಗೂ 1723 RAT) ಟೆಸ್ಟ್​ ಮಾಡಲಾಗಿದೆ.

ಮೈಸೂರು ಹಾಗೂ ದಕ್ಷಿಣ ಕನ್ನಡದಲ್ಲಿ ಒಬ್ಬರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲೇ ಅತಿ ಹೆಚ್ಚು (57) ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಈವರೆಗೆ 376 ಕೇಸ್ ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಒಟ್ಟು 464 ಸಕ್ರಿಯ ಪ್ರಕರಣಗಳಲ್ಲಿ 423 ಕೇಸ್‌ಗಳು ಹೋಮ್ ಐಸೋಲೇಷನ್‌ನಲ್ಲಿ ಇರಲು ಸೂಚನೆ ನೀಡಲಾಗಿದೆ. 41 ಕೇಸ್‌ಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅದರಲ್ಲಿ ಐಸಿಯು ನಲ್ಲಿ 16 ಕೇಸ್‌‌ಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.


Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version