ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಪುತ್ತೂರು.ನಗರ ಸಭೆ ಉಪಚುನಾವಣೆ. ಜಿದ್ದಾಜಿದ್ದಿನ ಕಣ. ತೆರವಾದ ಎರಡು ಕ್ಷೇತ್ರದಲ್ಲಿ ಇಂದು ಮತದಾನ. ಡಿ.30 ಫಲಿತಾಂಶ

Published

on

ಪುತ್ತೂರು : ನಗರ ಸಭಾ ಸದಸ್ಯರಿಬ್ಬರ ಮಠಣದಿಂದ ತೆರವಾದ ಎರಡು ಸ್ಥಾನಗಳಿಗೆ ಇಂದು (ಡಿ.27) ಉಪಚುನಾವಣೆ ನಡೆಯಲಿದೆ. ಬಹಳ ಕೂತೂಹಲ ಮೂಡಿಸಿರುವ ನಗರಸಭಾ ಉಪಚುನಾವಣೆಗೆ ಕೆಲ ಗಂಟೆಗಳಷ್ಟೇ ಬಾಕಿಯಿದ್ದು ಬಿಜೆಪಿ, ಕಾಂಗ್ರೆಸ್ ಹಾಗೂ ಪುತ್ತಿಲ ಪರಿವಾರದ ಅಭ್ಯರ್ಥಿಗಳು ಪಕ್ಷೇತರರಾಗಿ ಚುನಾವಣಾ ಕಣದಲ್ಲಿದ್ದಾರೆ.

ವಾರ್ಡ್-11 ನೆಲ್ಲಿಕಟ್ಟೆಯ ಉಪಚುನಾವಣೆಯು ಕೊಂಬೆಟ್ಟು ಶಾಲೆಯಲ್ಲಿ ಹಾಗೂ ವಾರ್ಡ್-1 ರಸ್ತೆಶ್ವರಿ ವರಾರದ ಉಪಚುನಾವಣೆಯು ಸುದಾನಶಾಲೆಯಲ್ಲಿ ನಡೆಯಲಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ.

ಅಭ್ಯರ್ಥಿಗಳ ವಿವರ :
*ಬಿಜೆಪಿಯಿಂದ ನಗರಸಭೆಯ ವಾರ್ಡ್ 1ರ ಅಭ್ಯರ್ಥಿಯಾಗಿ ಸುನೀತಾ ನಗರಸಭೆಯ ವಾರ್ಡ್ 11ರ ಅಭ್ಯರ್ಥಿಯಾಗಿ ರಮೇಶ್ ರೈ ಕಣದಲ್ಲಿದ್ದಾರೆ.
*ಕಾಂಗ್ರೆಸ್‌ ನಿಂದ ನಗರಸಭೆಯ ನಾರ್ಡ್ 1ರ ಅಭ್ಯರ್ಥಿಯಾಗಿ ದಿನೇಶ್ ಶೇವಿಗೆ ಹಾಗೂ ನಗರಸಭೆಯ ನಾರ್ಡ್ 11ರ ಅಭ್ಯರ್ಥಿಯಾಗಿ ದಾಮೋದರ ಭಂಡಾರ್ಕರ್ ಕಣದಲ್ಲಿದ್ದಾರೆ.
*ಪುತ್ತಿಲ ಪರಿವಾರದಿಂದ ವಾರ್ಡ್ 11 ರ ಅಭ್ಯರ್ಥಿಯಾಗಿ ಚಿಂತನ್ ಪಿ. ವಾರ್ಡ್ 1 ರ ಅಭ್ಯರ್ಥಿಯಾಗಿ ಅನ್ನಪೂರ್ಣ ಎಸ್.ಕೆ. ಕಣದಲ್ಲಿದ್ದಾರೆ.



ಅಭ್ಯರ್ಥಿಗಳ ನಡುವೆಯೂ ತೀವ್ರ ಪೈಪೋಟಿ ಇದ್ದು ಯಾರು ಗೆಲುವಿನ ನಗೆ ಬೀರಲಿದ್ದಾರೆ ಎಂದು ಕಾದು ನೋಡಬೇಕಿದೆ.ಇವತ್ತು (ಡಿ.27) ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದ್ದು ಅವಶ್ಯವಿದ್ದರೆ ಡಿ 29ರಂದು ಮರುಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.ನಗರ ಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್ ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8 ರಿಂದ 30 ರ ತನಕ ಜಾರಿಯಲ್ಲಿ ಇರಲಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version