Published
12 months agoon
By
Akkare Newsಪೆರ್ನೆ : ಶ್ರೀ ಸೋದೆ ಮಠಾಧೀಶರು ಅನುಗ್ರಹಿಸಿ ಪ್ರತಿಷ್ಠಾಪಿಸಿದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕಳೆಂಜ-ದೇಂತಡ್ಯ ಬಿಳಿಯೂರಿನಲ್ಲಿ ವಾರ್ಷಿಕ ಜಾತ್ರೋತ್ಸವವು ಡಿ.28 ರಿಂದ 29ರ ತನಕ ನಡೆಯಲಿದೆ.
ಕಾರ್ಯಕ್ರಮಗಳ ವಿವರ :
ಡಿ.28 ರಂದು ಬೆಳಿಗ್ಗೆ ದೇವತಾಪ್ರಾರ್ಥನೆ, ಆಚಾರ್ಯವರಣ ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಚಂಡಿಕಾಹೋಮ, ಮಹಾವಿಷ್ಣುಯಾಗ ನಡೆಯಲಿದೆ. ಬಳಿಕ ಉಗ್ರಾಣ ಮುಹೂರ್ತ, ಹೋಮದ ಪೂರ್ಣಾಹುತಿ ನೆರವೇರಲಿದೆ.
ಮಧ್ಯಾಹ್ನ ಸುವಾಸಿನಿ ಪೂಜೆ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ ಭಜನಾ ಕಾರ್ಯಕ್ರಮ, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಡಿ.29 ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ಭಜನಾ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕಗಳು, ಕ್ಷೇತ್ರದ ದೈವಗಳಿಗೆ ಮತ್ತು ನಾಗದೇವರಿಗೆ ತಂಬಿಲ ಸೇವೆ, ತುಲಾಭಾರ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.ಸಂಜೆ ಭಜನಾ ಕಾರ್ಯಕ್ರಮ, ರಾತ್ರಿ ಮಹಾಪೂಜೆ, ಶ್ರೀ ದೇವರಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ದರ್ಶನಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ವೈದಿಕ ಮಂತ್ರಾಕ್ಷತೆ, ಅನ್ನಸಂತರ್ಪಣೆ ನೆರವೇರಲಿದೆ.ಡಿ.28 ರಂದು ಬೆಳಿಗ್ಗೆ 10 ಗಂಟೆಗೆ ಹಸಿರು ಹೊರಕಾಣಿಕೆ ಸಮರ್ಪಣೆಯಾಗಲಿದೆ.