ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮುಖ್ಯ ಮಾಹಿತಿ ಗೃಹಲಕ್ಷ್ಮೀ ಶಿಬಿರದಲ್ಲಿ ಭಾಗವಹಿಸಿ. ಹಣ ಪಡೆಯಿರಿ !!!

Published

on

ಗೃಹಲಕ್ಷ್ಮೀ ಯೋಜನೆಯ ಮುಖ್ಯ ಮಾಹಿತಿ ಇಲ್ಲಿದೆ ನೋಡಿ!!!ಗೃಹಲಕ್ಷ್ಮಿ’ ಯೋಜನೆಯ ವಿಶೇಷ ಶಿಬಿರ ರಾಜ್ಯಾದ್ಯಂತ ಆರಂಭಗೊಂಡಿದ್ದು, ಗೃಹಲಕ್ಷ್ಮಿ ಯೋಜನೆಯಹಣ ಬಾರದೆ ಇರುವವರು ತಪ್ಪದೇ ಈ ಕೆಲಸಗಳನ್ನು ಮಾಡಿ ಬಿಡಿ!!

ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಡಿ.27 ರಿಂದ 29 ರವರೆಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ 3 ದಿನಗಳ ಕಾಲ ವಿಶೇಷ ಶಿಬಿರ ಆಯೋಜನೆ ಮಾಡಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಈ ಶಿಬಿರ 3 ದಿನಗಳ ಕಾಲ ನಡೆಯಲಿದ್ದು, ಶಿಬಿರದಲ್ಲಿ ಆಧಾರ್ ಜೋಡಣೆ, ಬ್ಯಾಂಕಿಗೆ ಸಂಬಂಧಿಸಿದ ತೊಂದರೆ, ಇಕೆವೈಸಿ ಅಪ್ಲೆಡ್, ಹೊಸ ಬ್ಯಾಂಕ್ ಖಾತೆ ಸಂಪರ್ಕ ಮುಂತಾದ ಸಮಸ್ಯೆಗಳನ್ನು ತಪ್ಪಿಸಿ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.



ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲು ತೊಂದರೆ ಅನುಭವಿಸುತ್ತಿರುವ ಮಹಿಳೆಯರು ಈ ಶಿಬಿರದ ಪ್ರಯೋಜನ ಪಡೆಯಲು ಮನವಿ ಮಾಡಲಾಗಿದೆ. ಫಲಾನುಭವಿಗಳು ನಿಗದಿತ ದಿನಗಳಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಶಿಬಿರದಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ, ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ, ಇ-ಕೆವೈಸಿ ನವೀಕರಣ, ಗೃಹಲಕ್ಷ್ಮಿ ಅರ್ಜಿಯ ಸ್ಥಿತಿ ಪರಿಶೀಲನೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಇತರ ಸಮಸ್ಯೆಗೆ ಪರಿಹಾರ ಪಡೆಯಬಹುದು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version