ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಅಲ್ಪಸಂಖ್ಯಾತರ ಇಲಾಖೆಯಿಂದ ೫ ಕೋಟಿ ಅನುದಾನ . ಶಾಸಕ ಅಶೋಕ್ ಕುಮಾರ್ ರೈ ಭರವಸೆ ನೀಡಿದ ಸಚಿವ ಝಮೀರ್.

Published

on

ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ ೫ ಕೋಟಿ ಅನುದಾನವನ್ನು ನೀಡುವುದಾಗಿ ಅಲ್ಪಸಂಖ್ಯಾತ. ಇಲಾಖೆಯ ಸಚಿವ ಝಮೀರ್ ಅಹಮದ್ ಶಾಸಕ ಅಶೋಕ್ ರೈ ಗೆ ಭರವಸೆ ನೀಡಿದ್ದಾರೆ.

ಸಚಿವರನ್ನು ಭೇಟಿಯಗಿ ಮಾತುಕತೆ ನಡೆಸಿದ ಶಾಸಕರು ತನ್ನ ಕ್ಷೇತ್ರದಲ್ಲಿರುವ ಅಲ್ಪಸಂಖ್ಯಾತ ಸಮುದಾಯದವರಿಗೆ ನೆರವು ನೀಡುವ ಉದ್ದೇಶದಿಂದ ಅನುದಾನ ನೀಡುವಂತೆ ಮನವಿ ಮಾಡಿದರು. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯ ಸೇರಿದ ಅನೇಕ ಕುಟುಂಬಗಳು ನನ್ನನ್ನು ಭೇಟಿಯಗಿ ಅನುದಾನ ನೀಡುವಂತೆ ಆಗ್ರಹಿಸಿದ್ದು ಇಲಾಖೆಯ ಮೂಲಕ ಅನುದಾನ ನೀಡುವಂತೆ ಶಾಸಕರು ಮನವಿ ಮಾಡಿದರು. ಶಾಸಕರ ಮನವಿಯನ್ನು ಪುರಸ್ಕರಿಸಿದ ಸಚಿವರು ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ೫ ಕೋಟಿ ರಊ ಅನುದಾನ ನೀಡುವುದಾಗಿ ತಿಳಿಸಿದ್ದಾರೆ.



ಕ್ಷೇತ್ರದ ಎಲ್ಲಾ ಸಮುದಾಯಕ್ಕೂ ನ್ಯಾಯ ಕೊಡಿಸುವ ಕೆಲಸವನ್ನು ಮಾಡಲಿದ್ದೇನೆ. ವಿವಿಧ ಇಲಾಖೆಯಿಂದ ಸಿಗುವ ಎಲ್ಲಾ ಸವಲತ್ತುಗಳು ಆಯಾ ಸಮುದಾಯಕ್ಕೆ ದೊರೆಯುವಂತಾಗಬೇಕು. ಬಡವರು ಎಲ್ಲಾ ಸಮುದಾಯದಲ್ಲೂ ಇದ್ದಾರೆ ಅಂಥವರೆಲ್ಲರಿಗೂ ಸರಕಾರದಿಂದ ಅನುದಾನ ದೊರೆಯುವಂತಾಗಬೇಕು ಎಂಬುದೇ ನನ್ನ ಉದ್ದೇಶವಾಗಿದೆ. ಅಲ್ಪಸಂಖ್ಯಾತ ಇಲಾಖೆಯಿಂದ ೫ ಕೋಟಿ ರೂ ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯಿಂದ ವಿಟ್ಲ ಅಂಬೇಡ್ಕರ್ ಭವನಕ್ಕೆ ೧ ಕೋಟಿ ಅನುದಾನ ದೊರೆಯಲಿದೆ. ಮುಂದಿನ ದಿನಗಳಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಅಭಿವೃದ್ದಿಯಲ್ಲಿ ಹೊಸದ ಅಧ್ಯಾಯವನ್ನೇ ಸೃಷ್ಟಿಸಲಿದೆ ಅಶೋಕ್ ರೈ, ಶಾಸಕರು ಪುತ್ತೂರು

Continue Reading
Click to comment

Leave a Reply

Your email address will not be published. Required fields are marked *

Advertisement