ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಪುತ್ತೂರು ನಗರಸಭಾ ಉಪಚುನಾವಣೆ ಫಲಿತಾಂಶ ಪ್ರಕಟ ಸಮಬಲ ಕಾಯ್ದು ಕೊಂಡ ಬಿಜೆಪಿ – ಕಾಂಗ್ರೆಸ್

Published

on

ಪುತ್ತೂರು: ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ಉಪಚುನಾವಣೆ ನಡೆದಿದ್ದು ಇಂದು ಫಲಿತಾಂಶ ಪ್ರಕಟಗೊಂಡಿದೆ.


ಬಹಳ ಕೂತೂಹಲ ಮೂಡಿಸಿರುವ ನಗರಸಭಾ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ವಾರ್ಡ್-11ರಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ರೈ ಗೆಲುವಿನ ನಗೆ ಬೀರಿದ್ದಾರೆ.ಅದೇ ರೀತಿ ವಾರ್ಡ್-1ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಶೇವಿರೆ ಜಯಗಳಿಸಿದ್ದಾರೆ.



ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಇದ್ದು ರಮೇಶ್ ರೈ ಹಾಗೂ ದಿನೇಶ್ ಶೇವಿರೆ ಅವರು ಜಯಗಳಿಸಿದ್ದಾರೆ. ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸವಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾ ರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆದಿತ್ತು.

Continue Reading
Click to comment

Leave a Reply

Your email address will not be published. Required fields are marked *

Advertisement