Published
12 months agoon
By
Akkare Newsಬಂಟ್ವಾಳ : ನಾಟಕ ಕಲಾವಿದನೋರ್ವ ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಕೊಡ್ಯಮಲೆ ಎಂಬಲ್ಲಿ ನಡೆದಿದೆ. ಕೊಡ್ಯಮಲೆ ನಿವಾಸಿ ಗೌತಮ್ ಮೃತಪಟ್ಟ ಅವಿವಾಹಿತ ಯುವಕ.
ಗೌತಮ್ ಬೆಳುವಾಯಿಯಲ್ಲಿ ನಡೆದ ಕದಂಬ ನಾಟಕದಲ್ಲಿ ಭಾಗವಹಿಸಿ ಹಿಂತಿರುಗುವ ವೇಳೆ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.ಗೌತಮ್ ಕದಂಬ ನಾಟಕದ ಓರ್ವ ಕಲಾವಿದನಾಗಿ ಮಿಂಚುವ ಯುವಕನಾಗಿದ್ದು, ಹಗಲು ಹೊತ್ತಿನಲ್ಲಿ ಬಿಸಿರೋಡಿನ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಅಪಘಾತ ನಡೆದು ಬೆಳಿಗ್ಗೆ ವರೆಗೆ ಯಾರು ನೋಡಿರಲಿಲ್ಲ. ಬೆಳಿಗ್ಗೆ ದಾರಿಯಲ್ಲಿ ಹೋಗುವವರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಟ್ರಾಫಿಕ್ ಎನ್.ಐ. ಸುತೇಶ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.