ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಹೊಸ ವರ್ಷ ಆಚರಣೆಗೆ ಮಾದಕ ವಸ್ತು ಸರಬರಾಜು ಮಾಡುವ ವ್ಯಕ್ತಿ ಮತ್ತು ನಿಷೇಧಿತ MDMA ಮಾದಕ ವಸ್ತು ಪತ್ತೆ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ನಿಷೇಧಿತ MDMA ಮಾದರ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ತಾಲೂಕು ದೇರಳಕಟ್ಟೆಯ ಮೈದಾನದ ಬಳಿ ಬಂಧಿಸಿದ ಘಟನೆ ನಡೆದಿದೆ.ಬಂಧಿತ ಆರೋಪಿ ಮಹಮ್ಮದ್ ರಮೀಜ್ ಅಲಿಯಾನ್ ಲೆಮೇನ್ ಟಿ ರಮೀಜ್( 33 ) ಎಂಬಾತನಾಗಿದ್ದು ಉಳ್ಳಾಲ ಬಸ್ತಿ ಪಡ್ಡು ನಿವಾಸಿಯಾಗಿದ್ದಾನೆ. ಎಂದು ತಿಳಿದು ಬಂದಿದೆ.

ಅಕ್ರಮವಾಗಿ MDMA ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರಿನಿಂದ ಮಾದಕ ವಸ್ತುವನ್ನು ಖರೀದಿ ಮಾಡಿ ತಂದು ಉಳ್ಳಾಲ ಪರಿಸರದಲ್ಲಿ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ.



5 ಲಕ್ಷ ರೂ. ಮೌಲ್ಯದ 100 ಗ್ರಾಂ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ ಮೊಬೈಲ್ ಫೋನ್ ಗಳನ್ನು ವಶ ಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 5,11,000 ರೂ. ಎಂದು ಅಂದಾಜಿಸಲಾಗಿದೆ.ಈತನ ಮೇಲೆ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದರೋಡೆ, ದರೋಡೆಗೆ ಸಂಚು, ಕೊಲೆಯತ್ನ ಹಾಗೂ ಕೊಣಾಜೆ ಠಾಣೆಯಲ್ಲಿ ದರೋಡೆ ಮಾಡಿದ ಬಗ್ಗೆ ಪ್ರಕರಣಗಳು ದಾಖಲಾಗಿವೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement